|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅ. 8 ರಂದು ಮಂಗಳಗಂಗೋತ್ರಿಯಲ್ಲಿ ‘ಕನಕ ಕೀರ್ತನ ಗಂಗೋತ್ರಿ’

ಅ. 8 ರಂದು ಮಂಗಳಗಂಗೋತ್ರಿಯಲ್ಲಿ ‘ಕನಕ ಕೀರ್ತನ ಗಂಗೋತ್ರಿ’



ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ನಡೆಯುವ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ  ಅಕ್ಟೋಬರ್ 08 ರಂದು ಶುಕ್ರವಾರ ಪೂರ್ವಾಹ್ನ 10.00 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಬಯಲು ರಂಗಮಂದಿರದಲ್ಲಿ ನಡೆಯಲಿರುವುದು.


ʼಸಾಮುದಾಯಿಕ ಪಾಲ್ಗೊಳ್ಳುವಿಕೆಯ ಆಶಯದ ಈ ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು, ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸಂಯೋಜಿತ ಹಾಗು ಸ್ವಾಯತ್ತ ಕಾಲೇಜುಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ವೈಧ್ಯಕೀಯ ಶಿಕ್ಷಣ, ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ, ವಿಶ್ವವಿದ್ಯಾನಿಲಯ ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿಗಳು ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಭಾಗವಹಿಸಬಹುದಾಗಿದೆ.


ಕೀರ್ತನ ಗಾಯನ ಕಾರ್ಯಕ್ರಮವು ಪ್ರೌಢಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ, ಅಧ್ಯಾಪಕ, ಸಿಬ್ಬಂದಿ ಹಾಗೂ ಸಾರ್ವಜನಿಕ ಎಂದು ಒಟ್ಟು ಏಳು ವಿಭಾಗಗಳಾಗಿ ನಡೆಯಲಿದೆ. ಆಸಕ್ತರು ಅಕ್ಟೋಬರ್ 7ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ಕೋರಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ, ಅಧ್ಯಾಪಕ, ಸಿಬ್ಬಂದಿ ಹಾಗೂ ಸಾರ್ವಜನಿಕ ವರ್ಗಗಳಲ್ಲಿ ಆಯ್ಕೆಯಾದ ಮೂವರು ಅಭ್ಯರ್ಥಿಗಳಿಗೆ ತಲಾ ರೂ. 2,000.00 ನಗದು ಪುರಸ್ಕಾರ ಹಾಗೂ ಕನಕ ಸ್ಮರಣಿಕೆಯನ್ನು `ಕನಕ ಜಯಂತಿ’ ಪ್ರಯುಕ್ತ ಮ0ಗಳಗ0ಗೋತ್ರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು. ಅಂದು ಈ ಅಭ್ಯರ್ಥಿಗಳಿಂದ ಕನಕ ಕೀರ್ತನ ಗಾಯನ ಪ್ರಸ್ತುತಿಯನ್ನು ನಡೆಸಲಾಗುವುದು.


ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿಭಾಗ ಮುಖ್ಯಸ್ಥರ ದೃಢೀಕರಣ ಪತ್ರದೊ0ದಿಗೆ ಮುಂಚಿತವಾಗಿ ಕನಕದಾಸ ಸಂಶೋಧನ ಕೇಂದ್ರದಲ್ಲಿ ತಮ್ಮ ಹೆಸರನ್ನು ನೋ0ದಾಯಿಸಬೇಕು; ಹಾಗೂ ತಾವು ಹಾಡಲಿರುವ ಕೀರ್ತನೆಯ ಸಾಲನ್ನು ಮುಂಚಿತವಾಗಿಯೇ ತಿಳಿಸಬೇಕು. ಕನಕದಾಸ ಸಂಶೋಧನ ಕೇಂದ್ರದಲ್ಲಿ ‘ಕನಕದಾಸರ ಕೀರ್ತನೆಗಳುʼ ಕೃತಿ ಲಭ್ಯವಿರುವುದರಿಂದ ಅಭ್ಯರ್ಥಿಗಳು ಸದುಪಯೋಗಿಸಿಕೊಳ್ಳಬಹುದು.


(0824) 2284360 -ಸಂಶೋಧನಾ ಕೇಂದ್ರ 9591480138 (ಆನಂದ ಎಂ-ಸಂಶೋಧನಾ ಸಹಾಯಕರು) ಈ ಸಂಖ್ಯೆಯ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. 


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post