|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ನಾಳೆ ಮಧ್ಯಾಹ್ನ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪ್ರದಾನ

ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ನಾಳೆ ಮಧ್ಯಾಹ್ನ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಪ್ರದಾನ


ಚಿತ್ರ ಸೌಜನ್ಯ: ಡಾ. ಶ್ರೀಶ ಕುಮಾರ್, ಬಹುವಚನಂ


ಪುತ್ತೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನಕ್ಕೆ ಪುತ್ತೂರಿನ ಹಿರಿಯ ಸಾಹಿತಿಗಳು ಮತ್ತು ಚಿಂತಕರಾದ ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರ 'ಮಹಾಭಾರತ ಅನುಸಂಧಾನದ ಭಾರತ ಯಾತ್ರೆ' ಕೃತಿ ಆಯ್ಕೆಯಾಗಿದ್ದು, ಅವರಿಗೆ ಅವರ ಮನೆಯಲ್ಲೇ ನಾಳೆ (ಸೆ.26) ಮಧ್ಯಾಹ್ನ 1:30ಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.


ಎಲ್ಲ ಪುರಸ್ಕೃತರಿಗೂ ಈ ತಿಂಗಳ 12ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ತೋಳ್ಪಾಡಿಯರವರು ಆ ದಿನ ಬೆಂಗಳೂರಿಗೆ ಹೋಗಲಾಗಿರಲಿಲ್ಲ. ಹೀಗಾಗಿ ಅಕಾಡೆಮಿಯ ಅಧ್ಯಕ್ಷರು ಮತ್ತು ರಿಜಿಸ್ಟ್ರಾರ್ ಅವರು ಸ್ವತಃ ಹಿರಿಯ ಸಾಹಿತಿಯ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲು ನಿರ್ಧರಿಸಿದ್ದರು.


ಅದರಂತೆ ಅಕಾಡೆಮಿಯ ಅಧ್ಯಕ್ಷರಾದ ಡಾ. ಬಿ. ವಿ. ವಸಂತಕುಮಾರ್ ಹಾಗೂ ಅಕಾಡೆಮಿಯ ರಿಜಿಸ್ಟ್ರಾರ್ ಆದ ಎನ್. ಕರಿಯಪ್ಪ ಹಾಗೂ ಸದಸ್ಯರಾದ ಡಾ. ಬಿ.ಎಂ ಶರಭೇಂದ್ರ ಸ್ವಾಮಿ ಅವರು ಪುತ್ತೂರಿಗೆ ಆಗಮಿಸುತ್ತಿದ್ದು, ಭಾನುವಾರ ಕಾರ್ಯಕ್ರಮ ನಿಗದಿಯಾಗಿದೆ. ಡಾ. ಸ್ವಾಮಿ ಅವರು ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದಾರೆ.



(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 تعليقات

إرسال تعليق

Post a Comment (0)

أحدث أقدم