|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳಿಗೆ ತಮ್ಮನ್ನು ತೆರೆದುಕೊಳ್ಳಬೇಕು: ಡಾ. ಸುರೇಶ ವಿ

ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳಿಗೆ ತಮ್ಮನ್ನು ತೆರೆದುಕೊಳ್ಳಬೇಕು: ಡಾ. ಸುರೇಶ ವಿ


ಪುತ್ತೂರು: ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನಗಳು ಅತಿವೇಗವಾಗಿ ಬದಲಾಗುತ್ತಿವೆ. ಈ ಬದಲಾವಣೆಗಳಿಗೆ ಒಗ್ಗಿ ಕೊಳ್ಳುವುದರ ಜೊತೆಗೆ ಹೊಸ ತಂತ್ರಜ್ಞಾನಗಳಿಗೆ ತಮ್ಮನ್ನು ತೆರೆದುಕೊಂಡು, ಪೂರಕ ತರಬೇತಿಗಳನ್ನು ಪಡೆದು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಂಡರೆ ಮುಂದಿನ ದಿನಗಳಲ್ಲಿ ತಾಂತ್ರಿಕ ವಿದ್ಯಾರ್ಥಿಗಳಿಗೆ ವಿಪುಲ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಸುಳ್ಯದ ಕೆವಿಜಿ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥ ಡಾ. ಸುರೇಶ ವಿ. ಹೇಳಿದರು.


ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ವಿಭಾಗ ಹಾಗೂ ಐಕ್ಯುಎಸಿ ಘಟಕದ ಆಶ್ರಯದಲ್ಲಿ ನಡೆದ ‘Recent trends in mobile communications’ ಎಂಬ ವಿಷಯದ ಕುರಿತಾದ ವೆಬಿನಾರ್‍ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ನಿಸ್ತಂತು ಸಂವಹನ (wireless communication) ದ ವಿವಿಧ ಪ್ರಕಾರಗಳು, ಅವುಗಳ ಉಪಯೋಗಗಳು ಮತ್ತು ಮೊಬೈಲ್ ಕಮ್ಯುನಿಕೇಷನ್‍ನ ವಿವಿಧ ಹೊಸ ತಂತ್ರಜ್ಞಾನಗಳ ಕುರಿತಾಗಿ ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಇಂದಿನ ದಿನಗಳಲ್ಲಿ ತಂತ್ರಜ್ಞಾನದ ತಿಳುವಳಿಕೆ ಅತಿ ಅಗತ್ಯ ಎಂದು ನುಡಿದರು.


ಈ ಕಾರ್ಯಕ್ರಮದಲ್ಲಿ ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥೆ ಸುಪ್ರಭಾ, ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ.ಎಸ್, ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು. ಸುಮಾರು 60ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ತೃತೀಯ ಬಿಎಸ್ಸಿ ವಿದ್ಯಾರ್ಥಿಗಳಾದ ಸ್ವಾತಿ ಸಮನ್ವಿತ ಸ್ವಾಗತಿಸಿ, ಸುಶಾನ್ ಶಂಕರ್ ವಂದಿಸಿದರು. ಅಕ್ಷಯಾನಂದ  ಭಾರದ್ವಾಜ್ ಕಾರ್ಯಕ್ರಮ ನಿರೂಪಿಸಿದರು.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post