ಉಜಿರೆ: ಕೇಂದ್ರ ಸರ್ಕಾರದ ಆಯುಷ್ ಇಲಾಖಾ ಸಚಿವ ಸರ್ಬಾನಂದ ಸೋನೊವಾಲ್ ಇಂದು ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿ, ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾನ್ಯ ಸಚಿವರನ್ನು ಗೌರವಿಸಿದರು.
ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೂ ಭೇಟಿ ನೀಡಿದ ಸಚಿವರು ಆಸ್ಪತ್ರೆಯಲ್ಲಿರುವ ವಿಶೇಷ ಸೌಲಭ್ಯಗಳು, ಶಿಸ್ತು, ಸ್ವಚ್ಛತೆ ಮತ್ತು ಸೌಜನ್ಯಪೂರ್ಣ ಸೇವೆ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕ ಹರೀಶ್ ಪೂಂಜ ಮತ್ತು ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ. ಉಪಸ್ಥಿತರಿದ್ದರು. ಉಡುಪಿಯಲ್ಲಿ ಎಸ್.ಡಿ.ಎಂ. ಆಯುರ್ವೇದ ಆಸ್ಪತ್ರೆಯಲ್ಲಿ ರತ್ನಶ್ರೀ ಆರೋಗ್ಯಧಾಮವನ್ನು ಉದ್ಘಾಟಿಸಿದ ಬಳಿಕ ಸಚಿವರು ಧರ್ಮಸ್ಥಳಕ್ಕೆ ಆಗಮಿಸಿದರು.
“ಶ್ರೀ ಸನ್ನಿಧಿ” ಅತಿಥಿ ಗೃಹದಲ್ಲಿ ಭೋಜನ ಸ್ವೀಕರಿಸಿದ ಬಳಿಕ ಅವರು ಮಂಗಳೂರಿಗೆ ಪ್ರಯಾಣಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ