ಪುಂಜಾಲಕಟ್ಟೆ: ರಾಷ್ಟ್ರೀಯ ಶಿಕ್ಷಣ ನೀತಿ- ವಿಶೇಷ ಕಾರ್ಯಾಗಾರ

Upayuktha
0


ಪುಂಜಾಲಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು (ಸೆ.7) "ರಾಷ್ಟೀಯ ಹೊಸ ಶಿಕ್ಷಣ ನೀತಿ 2020" ವಿಶೇಷ ಕಾರ್ಯಾಗಾರ ನಡೆಯಿತು. ಡಾ. ವಿಶಾಲ್ ಪಿಂಟೋ, ಸಹಾಯಕ ಪ್ರಾಧ್ಯಾಪಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.


ಎನ್ಇಪಿಯ ಸಂರಚನೆ, ವೈಶಿಷ್ಟತೆ ಹಾಗೂ ಅನುಷ್ಠಾನ, ಪಠ್ಯಕ್ರಮ, ಮೌಲ್ಯಮಾಪನ, ಚಟುವಟಿಕೆ ಮತ್ತು ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುರಿತು ಅವರು ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಅವರು ಅಧ್ಯಕ್ಷತೆ ವಹಿಸಿದ್ದರು. ಪ್ರೊ. ದೀಕ್ಷಿತಾ ವರ್ಕಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. IQAC ಯ ಸಂಯೋಜಕರಾದ ಪ್ರೊ. ರವಿಶಂಕರ್. ಬಿ ಹಾಗೂ ಡಾ. ಲೋಕೇಶ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 21 ಉಪನ್ಯಾಸಕರು ಹಾಗೂ 98 ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top