'ನೇತಾ ಬನ್ ಗಯಾ ಅಭಿನೇತಾ...'
ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನ
ದೆಹಲಿ ಕರ್ನಾಟಕ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರಿನ ಕರ್ನಾಟಕ ಯಕ್ಷಭಾರತಿ ತಂಡವು ಭಾಸ್ಕರ ರೈ ಕುಕ್ಕುವಳ್ಳಿ ಅವರ ನೇತೃತ್ವದಲ್ಲಿ ಪ್ರದರ್ಶಿಸಿದ 'ಕೃಷ್ಣಾರ್ಜುನ ಕಾಳಗ' ಯಕ್ಷಗಾನದಲ್ಲಿ ಆಗ ಕೇಂದ್ರ ಸಚಿವರಾಗಿದ್ದ ಆಸ್ಕರ್ ಫರ್ನಾಂಡೀಸ್ ಮತ್ತು ಎಂ.ವೀರಪ್ಪ ಮೊಯಿಲಿ ಅವರು ಯಕ್ಷಗಾನ ವೇಷ ಧರಿಸಿ ಅಭಿನಯಿಸಿದ್ದರು. ಆಗ ರಾಷ್ಟ್ರ ಮಟ್ಟದ ಮಾಧ್ಯಮಗಳು 'ನೇತಾ ಬನ್ ಗಯಾ ಅಭಿನೇತಾ..' ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿದ್ದವು.
-----------
ಯಕ್ಷಗಾನ ವೇಷಧಾರಿಗಳಾಗಿ ಡಾ.ಆಸ್ಕರ್ ಫರ್ನಾಂಡೀಸ್ (ಭೀಷ್ಮ), ಭಾಸ್ಕರ ರೈ ಕುಕ್ಕುವಳ್ಳಿ (ಬಲರಾಮ), ಡಾ.ಎಂ.ವೀರಪ್ಪ ಮೊಯಿಲಿ (ಕರ್ಣ), ಡಾ.ಪುರುಷೋತ್ತಮ ಬಿಳಿಮಲೆ (ವಿದುರ), ಸರವು ಕೃಷ್ಣ ಭಟ್ (ಕೌರವ) ರನ್ನು ಚಿತ್ರದಲ್ಲಿ ಕಾಣಬಹುದು.
------------
ಹಿರಿಯ ರಾಜಕಾರಿಣಿ , ಕಲಾ ಪೋಷಕ ಡಾ. ಆಸ್ಕರ್ ಫರ್ನಾಂಡೀಸ್ ಅವರ ನಿಧನಕ್ಕೆ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಇದರ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ದೆಹಲಿ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಶ್ರದ್ಧಾಂಜಲಿ ಅರ್ಪಿಸಿದ್ದಾರೆ
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ