|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು ವಿವಿಯಲ್ಲಿ ನಾಳೆಯಿಂದ ಮೂರು ದಿನ ಕನ್ನಡ ವಿಜ್ಞಾನ ಸಮ್ಮೇಳನ

ಮಂಗಳೂರು ವಿವಿಯಲ್ಲಿ ನಾಳೆಯಿಂದ ಮೂರು ದಿನ ಕನ್ನಡ ವಿಜ್ಞಾನ ಸಮ್ಮೇಳನ


ಮಂಗಳೂರು: ಕರ್ನಾಟಕ ಸರ್ಕಾರದ ಐಟಿ-ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಸ್ವದೇಶೀ ವಿಜ್ಞಾನ ಆಂದೋಲನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಜಂಟಿಯಾಗಿ ಆಯೋಜಿಸಿರುವ ಮೂರು ದಿನಗಳ ಕನ್ನಡ ವಿಜ್ಞಾನ ಸಮ್ಮೇಳನ, ನಾಳೆ (ಸೆಪ್ಟೆಂಬರ್ 15) ಯಿಂದ ಮೂರು ದಿನಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯಲಿದೆ. 


ಸಮಾರಂಭವನ್ನು ಡಿಆರ್ಡಿಓ ಡೆಬೆಲ್ ನಿರ್ದೇಶಕ ಡಾ. ಟಿ ಎಂ ಕೊಟ್ರೇಶ್ ವಿವಿಯ 'ಮಂಗಳಾ ಸಭಾಂಗಣʼದಲ್ಲಿ ಬೆಳಗ್ಗೆ 10ಕ್ಕೆ ಉದ್ಘಾಟಿಸಲಿದ್ದಾರೆ. ರಾಮಕೃಷ್ಣ ಮಠದ ಜಿತಕಾಮಾನಂದ ಸ್ವಾಮೀಜಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಮೊದಲಾದವರು ಭಾಗವಹಿಸಲಿದ್ದಾರೆ. ರಾಜ್ಯ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವಥ್ ನಾರಾಯಣ ಆನ್ಲೈನ್ನಲ್ಲಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಭಾಗವಾಗಿ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನೂ ವಿತರಿಸಲಾಗುವುದು.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post