||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿಗೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ

ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿಗೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆ ಇಂದು ಪ್ರಮುಖವಾದ ಕೃಷಿ. ಕೃಷಿಕರನ್ನು ಆರ್ಥಿಕವಾಗಿಯೂ ಸಬಲರನ್ನಾಗಿಸಿದ ಆರ್ಥಿಕ ಬೆಳೆ. ಇದೀಗ ಹಲವು ವರ್ಷಗಳಿಂದ ಅಡಿಕೆಗೆ ಹಳದಿ ಎಲೆ ರೋಗ ಕಂಡುಬಂದಿದೆ. ಇಂದಿಗೂ ಯಾವುದೇ ಸೂಕ್ತವಾದ ಪರಿಹಾರ ಕಂಡುಬಂದಿಲ್ಲ. ಆದರೆ ದೇಶದಲ್ಲಿ ವಿವಿಧ ತಳಿಗಳಲ್ಲಿ ರೋಗ ನಿರೋಧಕ ತಳಿ ಅಭಿವೃದ್ಧಿ ಪಡಿಸುವ ತಂತ್ರಜ್ಞಾನ ಇದೆ. ಅದೇ ಮಾದರಿಯಲ್ಲಿ ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡಲು ಸಿಪಿಸಿಆರ್‌ಐ ಕೃಷಿ ವಿಜ್ಞಾನಿಗಳು ಪ್ರಯತ್ನಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ.  


ತೆಂಗು ಸೇರಿದಂತೆ ವಿವಿಧ ಕೃಷಿಯಲ್ಲಿ ಹಳದಿ ಎಲೆ ರೋಗ ಸೇರಿದಂತೆ ವಿವಿಧ ರೋಗ ನಿರೋಧಕ ತಳಿಯ ಅಭಿವೃದ್ಧಿಯನ್ನು ಈಗಾಗಲೇ ಬೆಳೆಸಲಾಗಿದೆ. ಆದರೆ ಅಡಿಕೆಗೆ ಹಳದಿ ಎಲೆರೋಗ ಕೇರಳದಲ್ಲಿ 1914 ರಲ್ಲಿ  ಕಾಣಿಸಿಕೊಂಡು  ಕರ್ನಾಟಕದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ಈ ರೋಗ ವೇಗವಾಗಿ ಹರಡುತ್ತಿದೆ. ಸುಳ್ಯದ ಸಂಪಾಜೆ, ಅರಂತೋಡು ಪ್ರದೇಶದಲ್ಲಿ ಇದ್ದ ಹಳದಿ ರೋಗ ಈಗ ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ಅಲ್ಲಲ್ಲಿ ಕಾಣಿಸಿಕೊಂಡು ಇದೀಗ ವ್ಯಾಪಿಸುತ್ತಿದೆ.


ಹೀಗಾಗಿ ಅಡಿಕೆ ಬೆಳೆಗಾರರು ಸಹಜವಾಗಿಯೇ ಭವಿಷ್ಯದ ಬಗ್ಗೆ ಆತಂಕಗೊಳ್ಳಬೇಕಾದ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ  ಉಳಿದ ಬೆಳೆಗಳಲ್ಲಿ ಅಭಿವೃದ್ಧಿ ಪಡಿಸಿದಂತೆಯೇ, ಅತಿ ಶೀಘ್ರದಲ್ಲಿ ಅಡಿಕೆ ಹಳದಿ ಎಲೆ ರೋಗಕ್ಕೆ ಕೂಡಾ ರೋಗ ನಿರೋಧಕ ತಳಿಯನ್ನು ಅಭಿವೃದ್ಧಿ ಪಡಿಸಲು ಸಿಪಿಸಿಐಆರ್‌ ವಿಜ್ಞಾನಿಗಳು ಮುಂದಾಗಬೇಕು ಹಾಗೂ ಸರಕಾರಗಳು ಇದಕ್ಕೆ ಅಗತ್ಯ ನೆರವು ನೀಡಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ದ ಕ ಜಿಲ್ಲೆಯ ಶಾಸಕರನ್ನು ಹಾಗೂ ಸರಕಾರವನ್ನು ಒತ್ತಾಯಿಸಿದೆ.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post