||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುನೀತ್‌ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

ಪುನೀತ್‌ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ


2018ರ ಸೆಪ್ಟೆಂಬರ್ 30 ರಂದು ಧರ್ಮಸ್ಥಳದಲ್ಲಿ ನಡೆದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಪುನೀತ್ ರಾಜ್‍ಕುಮಾರ್ ಭಾಗವಹಿಸಿದ್ದರು.


ಧರ್ಮಸ್ಥಳ: ಕನ್ನಡದ ಖ್ಯಾತ ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ವತಿಯಿಂದ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ಪುನೀತ್ ಅವರ ನಡೆ-ನುಡಿ, ಸಜ್ಜನಿಕೆ, ಸರಳ ವ್ಯಕ್ತಿತ್ವವನ್ನು ಸ್ಮರಿಸಿಕೊಂಡಿದ್ದಾರೆ.


ಅವರ ಸಂದೇಶದ ಪೂರ್ಣಪಾಠ ಇಲ್ಲಿದೆ:

ಖ್ಯಾತ ಚಲನಚಿತ್ರನಟ ಪುನೀತ್‍ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು. ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತು ಗೌರವಕ್ಕೆ ಪಾತ್ರರಾಗಿದ್ದರು.


ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ.


ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ.


-ಡಿ. ವೀರೇಂದ್ರ ಹೆಗ್ಗಡೆಯವರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post