ಡಾ. ಭಾರತಿ ಪಿಲಾರ್ ರವರಿಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ

Upayuktha
0


ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ. ಭಾರತಿ ಪಿಲಾರ್ ಅವರಿಗೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ರಾಜ್ಯ ಎನ್ಎಸ್ಎಸ್ ಕೋಶ 2018-19 ನೇ ಸಾಲಿನ “ಅತ್ಯುತ್ತಮ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ” ಪ್ರಶಸ್ತಿ ನೀಡಿ ಗೌರವಿಸಿದೆ.


ಇದೇ ವೇಳೆ ಕಾಲೇಜಿನ ಎನ್ಎಸ್ಎಸ್ ಘಟಕಕ್ಕೆ 2018-19 ನೇ ಸಾಲಿನ ರಾಜ್ಯ ಮಟ್ಟದ “ಅತ್ಯುತ್ತಮ ಎನ್ಎಸ್ಎಸ್ ಘಟಕ” ಪ್ರಶಸ್ತಿ ಲಭಿಸಿದೆ. ಪ್ರಾಂಶುಪಾಲೆ ಡಾ. ಅನಸೂಯ ರೈ ಇತ್ತೀಚೆಗೆ ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆ.ಸಿ. ನಾರಾಯಣ ಗೌಡ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.


ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವಥ್ ನಾರಾಯಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಇಲಾಖೆ ಆಯುಕ್ತ ವೆಂಕಟೇಶ್ ಕುಮಾರ್ ಆರ್, ರಾಜ್ಯ ಎನ್ಎಸ್ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top