ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಸಿಂಚನಾಲಕ್ಷ್ಮಿ 106ನೇ ರ‍್ಯಾಂಕ್‌

Chandrashekhara Kulamarva
0



ಪುತ್ತೂರು: ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಿಂಚನಾಲಕ್ಷ್ಮಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ‍್ಯಾಂಕ್‌ ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿದ್ಯಾರ್ಥಿನಿಯಾಗಿದ್ದಾಳೆ.


ಈಕೆ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ 96.16 ಪಸರ್ಂಟೈಲ್ ಅಂಕ, ಎಗ್ರಿಕಲ್ಚರ್ ಬಿಎಸ್ಸಿಯಲ್ಲಿ 530 ನೇ ರ‍್ಯಾಂಕ್‌ ಮತ್ತು ಇಂಜಿನಿಯರಿಂಗ್ ನಲ್ಲಿ 1582ನೇ ರ‍್ಯಾಂಕ್‌ ಗಳಿಸಿದ್ದಳು. ತನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರೈಸಿರುವ ಸಿಂಚನಾಲಕ್ಷ್ಮಿ ಪುತ್ತೂರಿನ ಬಂಗಾರಡ್ಕದ ಮುರಳೀಧರ ಭಟ್ ಮತ್ತು ಶೋಭಾ ಬಿ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



Post a Comment

0 Comments
Post a Comment (0)
To Top