ಕಾಸರಗೋಡು: ಕಾಸರಗೋಡಿನ ಕೃಷಿ ವಿಜ್ಞಾನ ಕೇಂದ್ರ- ಐಸಿಎಆರ್- ಸಿಪಿಸಿಆರ್‌ಐ ಸಹಯೋಗದಲ್ಲಿ ಬಾಳೆಕಾಯಿ, ಹಲಸಿನ ಕಾಯಿ, ಕೋಕಂ ಗಳ ಮೌಲ್ಯವರ್ಧನೆ ಕುರಿತು ವಿಶೇಷ ಉಪನ್ಯಾಸವನ್ನು ಶನಿವಾರ ಬೆಳಗ್ಗೆ 11:30ಕ್ಕೆ ಗೂಗಲ್ ಮೀಟ್ ವೇದಿಕೆಯಲ್ಲಿ ಆಯೋಜಿಸಿದೆ.
ಹೆಸರಾಂತ ಹಿರಿಯ ಪತ್ರಕರ್ತ, ಅಡಿಕೆ ಪತ್ರಿಕೆ ಸಂಪಾದಕರಾದ ಶ್ರೀಪಡ್ರೆ ಅವರು ಈ ವಿಚಾರವಾಗಿ ಉಪಯುಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಿದ್ದಾರೆ.
Banana, Jackfruit, Kokum: Farm to Table- ವಿಷಯದಲ್ಲಿ ಅವರು ಉಪನ್ಯಾಸ ನೀಡಲಿದ್ದಾರೆ.
ಆಸಕ್ತರು https://meet.google.com/pbx-qnnw-arc ಕೊಂಡಿಯ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಸರಿತಾ ಹೆಗ್ಡೆ ಅವರ ಪ್ರಕಟಣೆ ತಿಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ