ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ಪ್ರಥಮ ರ‍್ಯಾಂಕ್

Upayuktha
0


ಪುತ್ತೂರು: ಕರ್ನಾಟಕ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ ಎಂ.ಡಿ ಪೀಡಿಯಾಟ್ರಿಕ್ಸ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಚೈತ್ರಾ ಪಿ ರವರು ಪ್ರಥಮ ರ‍್ಯಾಂಕ್ ನ್ನು ಗಳಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಈಕೆ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2010ರಲ್ಲಿ ಪೂರೈಸಿ ಬಳಿಕ ಎಂಬಿಬಿಎಸ್ ಪದವಿಯನ್ನು ಹಾಸನ ಮೆಡಿಕಲ್ ಕಾಲೇಜಿನಲ್ಲಿ ಪಡೆದು ಎಂ.ಡಿ ಪೀಡಿಯಾಟ್ರಿಕ್ಸ್ ನ್ನು ಮಂಗಳೂರಿನ‌ ಎ.ಜೆ ಸಂಸ್ಥೆ ಯಲ್ಲಿ ಪೂರೈಸಿರುತ್ತಾರೆ.


ಪ್ರಸ್ತುತ ಯೆನೆಪೋಯಾ ಮೆಡಿಕಲ್ ಕಾಲೇಜಿನಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಕೆ ದೇಲಂಪಾಡಿಯ ಪಡಾರು ತಿರುಮಲೇಶ್ವರ ಭಟ್ ಮತ್ತು ಜಯಶ್ರೀ ಟಿ ಭಟ್ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top