ಮಂಗಳೂರು: ಕೇಂದ್ರ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ಜನ್ಮ ದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಸಮ್ಮುಖದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಛೇರಿಯ ಉಪ ಸಮಾದೇಷ್ಟರಾದ ರಮೇಶ್, ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ.ಎಸ್, ದಲಾಯತ್ ಮೀನಾಕ್ಷಿ ಹಾಗೂ ಗೃಹರಕ್ಷಕರಾದ ದಿವಾಕರ್, ಸುಲೋಚನ, ಜಯಲಕ್ಷ್ಮಿ, ಇವರುಗಳು ಪ್ರಮಾಣ ವಚನವನ್ನು ಮಾಡಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ