ಪಿಆರ್‌ಸಿಐ ಉಡುಪಿ-ಮಣಿಪಾಲ ಘಟಕದಿಂದ ವಿಶ್ವ ಸಂವಹನ ದಿನಾಚರಣೆ; ಸಾಧಕರಿಗೆ ಪುರಸ್ಕಾರ

Upayuktha
0



ಉಡುಪಿ: ಭಾರತೀ ಸಾರ್ವಜನಿಕ ಸಂಪರ್ಕ ಮಂಡಳಿ (ಪಿಆರ್‌ಸಿಐ)ಯ ಉಡುಪಿ- ಮಣಿಪಾಲ ಘಟಕದ ವತಿಯಿಂದ ನಾಳೆ (ಅ.28) ವಿಶ್ವ ಸಂವಹನಕಾರರ ದಿನವನ್ನು ಆಯೋಜಿಸಲಾಗಿದೆ.


ಸಂಜೆ 6 ಗಂಟೆಯಿಂದ ಕರಾವಳಿ ಜಂಕ್ಷನ್‌ ಬಳಿಯ ಹೋಟೆಲ್‌ ಮಣಿಪಾಲ ಇನ್‌ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು ಎಂದು ಉಡುಪಿ-ಮಣಿಪಾಲ ಘಟಕದ ಅಧ್ಯಕ್ಷ ಮರವಂತೆ ನಾಗರಾಜ ಹೆಬ್ಬಾರ್‌ ಅವರ ಪ್ರಕಟಣೆ ತಿಳಿಸಿದೆ. 


ಮಾಧ್ಯಮ ಕ್ಷೇತ್ರದ ಗಣ್ಯರು ಹಾಗೂ ಹಿರಿಯ ಜನಪದ ವಿದ್ವಾಂಸ ಕೆ.ಎಲ್ ಕುಂಡಂತಾಯ, ಕಾರ್ಕಳದ ಕೃಷಿ ಬಿಂಬ ಪತ್ರಿಕೆ ಸಂಪಾದಕ ರಾಧಾಕೃಷ್ಣ ತೊಡಿಆನ ಮತ್ತು ಕುಂದಾಪುರದ ಕುಂದಪ್ರಭ ಪತ್ರಿಕೆ ಸಂಪಾದಕ ಯು. ಸುರೇಂದ್ರ ಶೆಣೈ ಅವರಿಗೆ ಮರವಂತೆ ರಾಮಕೃಷ್ಣ ಹೆಬ್ಬಾರ್‌ ಸ್ಮಾರಕ 'ಮಾಧ್ಯಮ ಜಾಣ' ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಛಾಯಾಗ್ರಾಹಕರ ಸಂಘಟನೆಯ ಉಡುಪಿ ವಲಯಾಧ್ಯಕ್ಷರಾದ ಜನಾರ್ದನ ಕೊಡವೂರು ಅವರಿಗೆ ಕರಾವಳಿ ಇ-ಧ್ವನಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.


ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರು ಹಾಗೂ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈ ಮತ್ತು ಪ್ರಭಾವತಿ ಶೆಣೈ ದಂಪತಿ ಹಾಗೂ ಹಡಿಲು ಭೂಮಿ ಕೃಷಿಯ ಪ್ರೇರಕ ಶಕ್ತಿ, ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಹಾಗೂ ವಿಶ್ರಾಂತ ಮುಖ್ಯೋಪಾಧ್ಯಾಯರಾದ ಮುರಳಿ ಕಡೆಕಾರ್‌ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು.


ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪಿಆರ್‌ಸಿಐ ದಕ್ಷಿಣ ಭಾರತ ಘಟಕದ ಸಭಾಪತಿ ಕೆ. ಜಯಪ್ರಕಾಶ್‌ ರಾವ್‌, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮತ್ತು ಪುಣೆಯ ಉದ್ಯಮಿ ಸುಭಾಶ್ಚಂದ್ರ ಹೆಗ್ಡೆ ಅತಿಥಿಗಳಾಗಿ ಭಾಗವಹಿಸುವರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top