ಕಲಬುರಗಿ: ಕಲಬುರಗಿ ಜಿಲ್ಲೆ ಫರತಬಾದಾನ 15 ಜನ ಮಹಿಳೆಯರಿಗೆ ಪಂಚಗವ್ಯ ಉತ್ಪನ್ನಗಳ ಮೂಲಕ ಸ್ವ-ಉದ್ಯೋಗ ಒದಗಿಸಲು ಶ್ರೀ ಮಾಧವ ಗೋಶಾಲೆಯಲ್ಲಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.
ಚೀನಾ ವಸ್ತುಗಳನ್ನು ಬಹಿಷ್ಕರಿಸುವ ನಿಟ್ಟಿನಲ್ಲಿ ಶ್ರೀ ಮಾಧವ ಗೋಶಾಲೆ ಗೋವಿನ ಸಗಣಿಯಿಂದ ಹಣತೆ, ಧೂಪ ಬತ್ತಿ ಇನ್ನಿತರ ಉತ್ಪನ್ನಗಳನ್ನು ತಯಾರಿಸಲು ಗ್ರಾಮೀಣ ಮಹಿಳೆಯರಿಗೆ ಸ್ವ-ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ.
ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಲಬುರಗಿಯ ಅಧಿಕಾರಿಗಳಾದ ಶ್ರೀಮತಿ ಸುಲೋಚನಾ ಹಾಗೂ ಶ್ರೀಮತಿ ಪುಷ್ಪಾವತಿ ಠಾಕೂರ ಅವರು ಉಪಸ್ಥಿತರಿದ್ದರು. ಶ್ರೀ ಮಾಧವ ಗೋಶಾಲೆ ರಾಜ್ಯದ ಐ.ಎಸ್.ಓ ಪ್ರಮಾಣೀಕೃತ ಎರಡನೆಯ ಗೋಶಾಲೆಯಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ