ವಿವೇಕಾನಂದ ಕಾಲೇಜಿನಲ್ಲಿ ಸಂಶೋಧನ ಕೇಂದ್ರ ಅ.12ರಂದು ಉದ್ಘಾಟನೆ

Upayuktha
0


 


ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಕಾಲೇಜಿನ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ವಿವೇಕಾನಂದ ಸಂಶೋಧನ ಕೇಂದ್ರದ ಉದ್ಘಾಟನೆಯು ಅ.12ರಂದು ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಸಂಶೊಧನ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಅಧ್ಯಕ್ಷ ಡಾ. ಕೆ.ಪ್ರಬಾಕರ ಭಟ್ ವಹಿಸಲಿರುವರು. ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ. ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಶ್ರೀಪತಿ ಕಲ್ಲೂರಾಯ, ‘ಸಮತ್ವ’ ಸಂಶೋಧನಾ ಸಂಚಿಕೆಯನ್ನು ಅನಾವರಣಗೊಳಿಸಿ ದಿಕ್ಸೂಚಿ ಭಾಷಣ ಮಾಡಲಿರುವರು.


ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸ ಪೈ ಹಾಗೂ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್, ವಿವೇಕಾನಂದ ಸಂಶೋಧನ ಕೇಂದ್ರದ ನಿದೇಶಕ ಡಾ.ಶ್ರೀಧರ್ ಹೆಚ್.ಜಿ. ಹಾಗೂ ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಉಪಸ್ಥಿತರಿರುವರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top