ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ಪದ್ಧತಿ- 2020 ರ ಜಾರಿ ಕುರಿತಂತೆ ಒಂದು ದಿನದ ಕಾರ್ಯಾಗಾರ ಮತ್ತು ಸಂವಾದವನ್ನು ನಗರದ ಪುರಭವನದಲ್ಲಿ ಅಕ್ಟೋಬರ್ 25ರಂದು ಬೆಳಗ್ಗೆ 10 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಗೋಪಾಲಕೃಷ್ಣ ಜೋಷಿ ಸಂಪನ್ಮೂಲ ವ್ಯಕ್ತಿಯಾಗಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿವಿಯ ವ್ಯಾಪ್ತಿಗೆ ಒಳಪಡುವ ಸ್ನಾತಕೋತ್ತರ ವಿಭಾಗಗಳ ಅಧ್ಯಕ್ಷರುಗಳು/ಸಂಯೋಜಕರು, ಬೋಧಕ ಸಿಬ್ಬಂದಿ, ಪ್ರಾಂಶುಪಾಲರುಗಳು ಮತ್ತು ಅಧ್ಯಯನ ಮಂಡಳಿಗಳ ಅಧ್ಯಕ್ಷರುಗಳು ಹಾಗೂ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಆನ್ಲೈನ್ನಲ್ಲಿಯೂ ಲಭ್ಯವಿದ್ದು (https://youtu.be/cOcbGHu5qac) ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು.
ಮಧ್ಯಾಹ್ನ 2.30 ರಿಂದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಾಂಶುಪಾಲರುಗಳು, ಆಡಳಿತ ಮಂಡಳಿಗಳ ಪ್ರತಿನಿಧಿಗಳು, ಸ್ವಾಯತ್ತ ಕಾಲೇಜುಗಳ ಎನ್ಇಪಿ- 2020 ನೋಡಲ್ ಅಧಿಕಾರಿಗಳ ಸಭೆ ನಡೆಯಲಿದೆ, ಎಂದು ಎಂದು, ಕುಲಸಚಿವರ ಪ್ರಕಟಣೆ ತಿಳಿಸಿದೆ. ವಿವಿಯು 2021-22 ನೇ ಸಾಲಿನಿಂದಲೇ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ