ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021ರ ಡಿಸೆಂಬರ್‌ನಲ್ಲಿ ಗಿರಿಜನ ಉಪಯೋಜನೆಯಡಿ ರಾಜ್ಯ ಮಟ್ಟದ ಹತ್ತು ದಿನಗಳ “ಭಾಷಾ ಕೌಶಲ ಮತ್ತು ಕರಡು ತಿದ್ದುವಿಕೆ” ಕಮ್ಮಟ ನಡೆಸುತ್ತಿದ್ದು, ಅರ್ಜಿ ಆಹ್ವಾನಿಸಿದೆ.
20 ರಿಂದ 45 ವರ್ಷದೊಳಗಿನ ಜಿಲ್ಲೆಯ ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅದಕ್ಕೆ ನವೆಂಬರ್ 30 ಕೊನೆಯ ದಿನ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ http://karnatakasahithyaacademy.org ನಲ್ಲಿ ಅರ್ಜಿ ಹಾಗೂ ವಿವರ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ