ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ: ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Upayuktha
0

 


ಮಂಗಳೂರು: ಹುಟ್ಟಿನಿಂದಲೇ ಶ್ರವಣದೋಷವುಳ್ಳ ಮಕ್ಕಳ ತಾಯಿಂದಿರಿಗೆ ಪ್ರಾರಂಭಿಕ ಹಂತದಲ್ಲೇ ಅವರ ಮಗುವಿನ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಅರಿವು ಮೂಡಿಸುವ ತರಬೇತಿಗೆ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ನಾಲ್ಕು ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಅವರ ತಾಯಿಂದಿರ ಸಹಿತ ವಾಕ್ ತರಬೇತಿ ನೀಡಲಾಗುವುದು. ಅವರಿಗೆ ವಸತಿ ರಹಿತ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಪೂರ್ವದಲ್ಲಿ, ಶ್ರವಣದೋಷವುಳ್ಳ ಪುನರ್ವಸತಿ ಸಂಬಂಧಿಸಿದ ಚಿಕಿತ್ಸೆಗಳನ್ನು ನೀಡಲು ಸೌಕರ್ಯವನ್ನು ಹೊಂದಿರಬೇಕು. ಸೂಕ್ತ ಕಟ್ಟಡದ ವ್ಯವಸ್ಥೆ ಹಾಗೂ ಇತರೆ ಸಂಬಂಧಿತ ಸೌಕರ್ಯವನ್ನು ಪಡೆದಿರುವ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಹಾಗೂ ತರಬೇತಿಯನ್ನು ನೀಡುತ್ತಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.


ಅರ್ಜಿ ಹಾಗೂ ಇತರೆ ಮಾಹಿತಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ದೂ.ಸಂ: 0824-2458173 ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top