ಮಂಗಳೂರು: ದಿನಾಂಕ 18-11-2021ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ, ಆಜಾಧಿಕಿ ಅಮೃತ್ ಮಹೋತ್ಸವದ ಅಂಗವಾಗಿ ಗೃಹರಕ್ಷಕರಿಗೆ ಸಂವಿಧಾನದ ಬಗ್ಗೆ ಅರಿವು ಜಾಗೃತಿ ಕಾರ್ಯಕ್ರಮ ಬೆಳಿಗ್ಗೆ 8 ಗಂಟೆಗೆ ನಡೆಯಲಿರುವುದು.
ಸಂಪನ್ಮೂಲ ವ್ಯಕ್ತಿಗಳಾಗಿ ವಿಶ್ರಾಂತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಪಿ ಅನಂತಕೃಷ್ಣ ಭಟ್ ಮಂಗಳೂರು ಇವರು ಭಾಗವಹಿಸಲಿದ್ದಾರೆ. ಎಲ್ಲಾ ಗೃಹರಕ್ಷಕ ಗೃಹರಕ್ಷಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೌರರಕ್ಷಣಾ ತಂಡದ ಕಾರ್ಯಕರ್ತರು ಸಹ ಭಾಗವಹಿಸಬಹುದೆಂದು ತಿಳಿಸಿದ್ದಾರೆ.