ಮಂಗಳೂರು: ದಿನಾಂಕ 28-11-2021ನೇ ಭಾನುವಾರ ನಗರದ ನಂತೂರಿನಲ್ಲಿರುವ ಶ್ರೀ ಭಾರತೀ ಕಾಲೇಜು, ಇಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ) ಮಂಗಳೂರು ಮತ್ತು ಮಂಗಳೂರು ಹವ್ಯಕ ಸಭಾ ಇದರ ಸಂಯುಕ್ತ ಆಶ್ರಯದಲ್ಲಿ ರಕ್ತನಿಧಿ, ಸರಕಾರಿ ವೆನ್‌ಲಾಕ್ ಆಸ್ಪತ್ರೆ ಇದರ ಸಹಕಾರದೊಂದಿಗೆ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ.
ಆಸಕ್ತರು ರಕ್ತದಾನ ಮಾಡಲು ಅವಕಾಶವಿದೆ ಎಂದು ಕಾರ‍್ಯಕ್ರಮದ ಸಂಯೋಜಕರಾದ, ಚೂಂತಾರು ಸರೋಜಿನಿ ಪ್ರತಿಷ್ಠಾನದ ಕಾರ‍್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ