ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ 'ಸಂವಿಧಾನ ದಿನ'ದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ‍್ಯಕ್ರಮವು ಶುಕ್ರವಾರ ನಡೆಯಿತು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ವಿದ್ಯಾರ್ಥಿಗಳಿಗೆ ಸಂವಿಧಾನದ ಹಾಗೂ ಸಂವಿಧಾನ ದಿನದ ಮಹತ್ವವನ್ನು ವಿವರಿಸಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸ್ಮಿತಾ ಪಿ.ಜಿ. ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಕಾರ‍್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದ ಹಾಗೂ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ