ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಶುಕ್ರವಾರ ಭಾರತದ 71 ನೇ ಸಂವಿಧಾನ ದಿನವನ್ನು ಸರಳವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ದಿನಾಚರಣೆ ಘೋಷಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲತಾ ಎ. ಪಂಡಿತ್ ವಿದ್ಯಾರ್ಥಿಗಳಿಗೆ ಸಂವಿಧಾನದ ಮೊದಲ ಪೀಠಿಕೆಯನ್ನು ಬೋಧಿಸಿದರು.
ವಿದ್ಯಾರ್ಥಿಗಳು ಎದ್ದು ನಿಂತು ಬಲಗೈ ಮುಂದೆ ಚಾಚಿ ಪೀಠಿಕೆಯನ್ನು ಪುನರುಚ್ಚರಿಸುವ ಮೂಲಕ ಸಂವಿಧಾನದ ಆಶಯಗಳನ್ನು ರಕ್ಷಿಸುವ ಪ್ರತಿಜ್ಞೆಗೈದರು. ಭಾರತ ಸರ್ಕಾರವು 2015 ನವೆಂಬರ್ 15 ರಂದು ಗೆಜೆಟ್ ಅಧಿಸೂಚನೆಯ ಮೂಲಕ ನವೆಂಬರ್ 26ನ್ನು ಸಂವಿಧಾನ ದಿನವೆಂದು ಘೋಷಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ