||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರು: ತುಳು ಧರ್ಮವೆಂದರೆ ಮೌಲ್ಯಯುತ ಜೀವನ ಪದ್ಧತಿ: ಡಾ. ಕಲ್ಲಡ್ಕ ಪ್ರಭಾಕರ ಭಟ್‌

ಮಂಗಳೂರು: ತುಳು ಧರ್ಮವೆಂದರೆ ಮೌಲ್ಯಯುತ ಜೀವನ ಪದ್ಧತಿ: ಡಾ. ಕಲ್ಲಡ್ಕ ಪ್ರಭಾಕರ ಭಟ್‌


ಮಂಗಳೂರು: ʼಧರ್ಮʼ ಮತ್ತು ʼರಿಲಿಜನ್ʼ ಎರಡೂ ಒಂದೇ ಅಲ್ಲ. ಧರ್ಮವೆಂದರೆ ಮೌಲ್ಯಯುತ ಜೀವನ ಪದ್ಧತಿ. ನಾವು ತುಳುವರು ಬೆಳಕು ನೀಡುವ ಹಣತೆಯಂತೆ ಧರ್ಮವನ್ನು ಅನುಸರಿಸಿ, ಸಂಸ್ಕೃತಿಯನ್ನು ಹಂಚಿ, ಸಮಾಜಕ್ಕೆ ಬದುಕುವವರು, ಎಂದು ಪುತ್ತೂರಿನ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಭಿಪ್ರಾಯಪಟ್ಟಿದ್ದಾರೆ.


ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜುಗಳು ಜಂಟಿಯಾಗಿ ವಿವಿ ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ 'ತುಡರ್ ಪರ್ಬʼ ಮತ್ತು ಎರಡನೇ ವರ್ಷದ ತುಳು ಸ್ನಾತಕೋತ್ತರ ವಿದ್ಯಾರ್ಥಿಗಳ ವಿದಾಯಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತುಳುನಾಡು ವಿಭಿನ್ನ ಸಂಸ್ಕೃತಿಗಳಿಗೆ ಆಶ್ರಯ. ತುಳು ಅಧ್ಯಯನದ ಮೂಲಕ ನಾವು ನಮ್ಮ ಮೂಲವನ್ನು ಕಂಡುಕೊಳ್ಳುವ ಪ್ರಯತ್ನ ಪಡುತ್ತಿರುವುದು ಶ್ಲಾಘನೀಯ. ಸಂಸ್ಕೃತಿ, ಆಚರಣೆಗಳು ಕಾಲಾತೀತ. ಅವುಗಳ ರಕ್ಷಣೆಯೆ ಕಾರ್ಯ ಪ್ರತಿ ಮನೆಯಿಂದ ಆರಂಭವಾಗಬೇಕು, ಎಂದರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ ಸಿ ಕೆ ಕಿಶೋರ್ ಕುಮಾರ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ನಮ್ಮ ಸಂಸ್ಕೃತಿಯ ಮೌಲ್ಯವನ್ನು ನಾವು ಅರಿಯಬೇಕು, ಅದನ್ನು ಯುವಕರಿಗೆ ಹಂಚಿ ಮುಂದಿನ ಪೀಳಿಗೆಗೂ ಉಳಿಯುವಂತೆ ಮಾಡುವ ಅಗತ್ಯವಿದೆ. ನೂತನ ಶಿಕ್ಷಣ ಪದ್ಧತಿಯಲ್ಲಿ ಇದಕ್ಕೆ ಅವಕಾಶವಿದೆ, ಎಂದರು.


ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ, ಉದ್ಯಮಿ ಸುನಿಲ್ ಆಚಾರ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಭಾಗವಾಗಿ ನಿರ್ಗಮಿಸುತ್ತಿರುವ ತುಳು ಉಪನ್ಯಾಸಕ ಶ್ಯಾಮಪ್ರಸಾದ್ ಅಲಸಂಡೆಮಜಲು ಮತ್ತು ತುಳು ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್‌ ವಿಜೇತ ಭರತೇಶ್ ಅವರನ್ನು ಸನ್ಮಾನಿಸಲಾಯಿತು. ಡಾ. ಕಲ್ಲಡ್ಕ ಪ್ರಭಾಕರ ಭಟ್ ದೀಪ ಬೆಳಗಿಸಿ ʼಭಾರತ ಮಾತಾ ಪೂಜನʼ ನೆರವೇರಿಸಿದರು.


ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು. ಸುರೇಶ್ ರಾವ್ ಅತ್ತೂರು ಅವರ 'ತುಳುನಾಡ ಬಲೀಂದ್ರೆʼ ಎಂಬ ಹರಿಕಥೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ. ಕೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡುಗಳನ್ನಾಡಿದರು. ವಿಜಯಲಕ್ಷ್ಮೀ ಕಟೀಲ್ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕರಾದ ಪ್ರಶಾಂತಿ ಶೆಟ್ಟಿ, ಡಾ. ವಿನೋದಾ ಮೊದಲಾದವರು, ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post