ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭ

Upayuktha
0

 


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ 2021 ಇದರ ಸಮಾರೋಪ ಸಮಾರಂಭವು ಇಂದು ಜಿಲ್ಲಾ ಗೃಹರಕ್ಷಕದಳದ ಕಛೇರಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಮಂಗಳೂರು ನಗರದ ಅಪರಾಧ ಮತ್ತು ಸಂಚಾರ ಇದರ ಪೊಲೀಸ್ ಉಪ ಆಯುಕ್ತ ಬಿ.ಪಿ ದಿನೇಶ್ ಕುಮಾರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.  


ಗೃಹರಕ್ಷಕರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು ಪೊಲೀಸ್ ಇಲಾಖೆಗೆ ಬಂದಾಗಿನಿಂದಲೂ ಗೃಹರಕ್ಷಕರು ಯಾವ ರೀತಿಯಲ್ಲಿ ಪೊಲೀಸ್ ಇಲಾಖೆಗೆ ಸರಿಸಮಾನವಾಗಿ, ಉತೃಷ್ಟವಾದ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಪೊಲೀಸ್ ಇಲಾಖೆಗೆ ಹೆಗಲು ಕೊಟ್ಟು ಕೆಲಸ ನಿರ್ವಹಿಸುವ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಅತೀ ಅಗತ್ಯ. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅತೀ ಅವಶ್ಯಕ ಕೋವಿಡ್ ಕಾರಣದಿಂದ ಕೇವಲ 50 ಗೃಹರಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.


ಮುಂದೆ ಹೆಚ್ಚಿನ ಗೃಹರಕ್ಷಕರು ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ನುಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಮಾದೇಷ್ಟರಾದ ಡಾ; ಮುರಲೀ ಮೋಹನ್ ಚೂಂತಾರು ಮಾತನಾಡಿ ದೈಹಿಕ ಕ್ಷಮತೆ ಎನ್ನುವುದು ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿರಬೇಕು. ಯಾವುದೇ ವೃತ್ತಿ ಅಥವಾ ಯಾವುದೇ ಕೆಲಸ ಮಾಡುವಾಗ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತೀ ಅವಶ್ಯಕ. ಆರೋಗ್ಯಕ್ಕಿಂತ ಉತ್ತಮವಾದ ಸಂಪತ್ತು ಬೇರೆ ಯಾವುದೂ ಇಲ್ಲ.


ಆರೋಗ್ಯವನ್ನು ಕಾಪಾಡಿಕೊಳ್ಳಲು, ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ನಿರಂತರವಾದ ದೈಹಿಕ ಚಟುವಟಿಕೆಗಳು ಪೂರಕವಾದಂತಹ ಕ್ರೀಡಾಕೂಟಗಳು ಅಗತ್ಯ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಯವರೂ ಪ್ರತೀ ವರ್ಷ ಕ್ರೀಡಾಕೂಟವನ್ನು ಆಯೋಜಿಸುತ್ತಾರೆ. ನಮ್ಮ ದಿನನಿತ್ಯದ ಕೆಲಸದ ಜೊತೆಗೆ ಒಂದಷ್ಟು ದಿನ ನಮ್ಮ ಮನಸ್ಸನ್ನು ಉಲ್ಲಾಸಿತರಾಗಿಸಲು, ಒತ್ತಡವನ್ನು ನಿಯಂತ್ರಿಸಲು ಈ ಕ್ರೀಡಾಕೂಟ ಅವಶ್ಯಕ. 


ಆಟದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಸೋಲೇ ಗೆಲುವಿನ ಸೋಪಾನ ಆಟೋಟಗಳಿಂದ ನಾವೆಲ್ಲ ಬದುಕಿನ ಪಾಠ ಕಲಿಯಬೇಕು ಗೆದ್ದವರಿಗೆ ಶುಭಾಶಯಗಳು, ಸೋತವರಿಗೂ ಶುಭಾಶಯಗಳು, ಯಾಕೆಂದರೆ ಆಟದಲ್ಲಿ ಸೋಲು, ಗೆಲುವೇ ಇದ್ದೇ ಇರುತ್ತದೆ. ಒಬ್ಬ ಗೆಲ್ಲಬೇಕಾದರೆ ಇನ್ನೊಬ್ಬ ಸೋಲಲೇ ಬೇಕು. ಇದರಲ್ಲಿ ಭಾಗವಹಿಸುವುದು ಅವಶ್ಯಕ. ಕ್ರೀಡೆಯಲ್ಲಿ ವ್ಯಕ್ತಿ ಗೆಲ್ಲುವುದಲ್ಲ, ಕ್ರೀಡೆ ಗೆಲ್ಲಬೇಕು. ಗೆದ್ದವರು ಉಡುಪಿ ಜಿಲ್ಲೆಯಲ್ಲಿ ನಡೆಯುವ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಯ ಗೌರವವನ್ನು ಮಗದಷ್ಟು ಎತ್ತರಕ್ಕೆ ಏರಿಸಿ ಅಲ್ಲಿಂದ ಗೆದ್ದು, ರಾಜ್ಯಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿ ಎಂದು ನುಡಿದರು.

 

ರಮೇಶ್ ಡೆಪ್ಯೂಟಿ ಕಮಾಂಡೆಂಟ್ ಸ್ವಾಗತಿಸಿದರು. ರಮೇಶ್ ಭಂಡಾರಿ ವಂದನಾರ್ಪಣೆ ಮಾಡಿದರು. ಶುಭ ಕುಲಾಲ್ ಪ್ರಾರ್ಥನೆ ಮಾಡಿದರು. ಕಾರ್ಯಕ್ರಮ ನಿರ್ವಹಣೆಯನ್ನು ರಾಘವೇಂದ್ರ ಇವರು ನಿರ್ವಹಿಸಿದರು. ಜಿಲ್ಲಾ ಗೃಹರಕ್ಷಕದಳದ 35 ಮಂದಿ ಗೃಹರಕ್ಷಕರು ಆಯ್ಕೆಯಾಗಿ ಉಡುಪಿಯಲ್ಲಿ ನಡೆಯುವ ಪಶ್ಚಿಮ ವಲಯದ ಕ್ರೀಡಾಕೂಟಕ್ಕೆ ಆಯ್ಕೆಯಾದರು. ಈ ಕಾರ್ಯಕ್ರಮದಲ್ಲಿ ಕಛೇರಿ ಅಧೀಕ್ಷರಾದ ರತ್ನಾಕರ್, ಪ್ರಥಮ ದರ್ಜೆ ಸಹಾಯಕರಾದ ಅನಿತಾ.ಟಿ.ಎಸ್, ಬಂಟ್ವಾಳ ಘಟಕದ ಘಟಕಾಧಿಕಾರಿ ಐತಪ್ಪ, ವಿಟ್ಲ ಘಟಕದ ಪ್ರಭಾರ ಘಟಕಾಧಿಕಾರಿ ಸಂಜೀವ ಹಾಗೂ ಗೃಹರಕ್ಷಕ ಮತ್ತು ಗೃಹರಕ್ಷಕಿಯವರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top