ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ಕಾಲೇಜಿನ ಏಳಿಗೆಗೆ ಮಹತ್ತರ ಕೊಡುಗೆ ನೀಡಿರುವ ಪ್ರೊ.ಗಣಪತಿ ಭಟ್ ಕುಳಮರ್ವ ಇವರು ತಮ್ಮ ಕರ್ತವ್ಯದಿಂದ ನಿವೃತ್ತಿ ಹೊಂದುತ್ತಿದ್ದಾರೆ.
ನವೆಂಬರ್ 27ರಂದು ಸಮಯ ಬೆಳಿಗ್ಗೆ 9:30ಕ್ಕೆ ಸರಿಯಾಗಿ ವಿಶ್ವಕರ್ಮ ಸಭಾಭವನ ಪುಂಜಾಲಕಟ್ಟೆಯಲ್ಲಿ ಪ್ರೊ.ಗಣಪತಿ ಭಟ್ ಇವರಿಗೆ ಕಾಲೇಜಿನ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಲಯದ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಜೆನಿಫರ್ ಲೊಲಿಟಾ ಸಿ ಇವರು ವಹಿಸಿಕೊಳ್ಳಲಿದ್ದಾರೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಹರೀಶ್ ಪೂಂಜ ಇವರು ಅಭ್ಯಾಗತರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ವಿಧಾನ ಪರಿಷತ್ ಸದಸ್ಯರಾಗಿರುವ ಪ್ರತಾಪ್ ಸಿಂಹ ನಾಯಕ್ ಹಾಗೂ ಹರೀಶ್ ಕುಮಾರ್ ಇವರ ಗೌರವ ಉಪಸ್ಥಿತಿ ಇರಲಿದೆ. ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶ್ರಿವರ್ಮ ಅಜ್ರಿ ಇವರು ಅಭಿನಂದನಾ ಭಾಷಣವನ್ನು ನಡೆಸಿಕೊಡಲಿದ್ದಾರೆ.
ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹಳ್ಳಿಮನೆ ಹೈದರಾಲಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಜ್ವಲ್ ಸಂತೋಷ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ