||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ನೇತ್ರದಾನ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ನೇತ್ರದಾನ ಶಿಬಿರಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮುಖ್ಯ ಕಚೇರಿಯಲ್ಲಿ ಇಂದು ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರದಾನ ಅಭಿಯಾನ ನಡೆಯಿತು. ಗೃಹ ರಕ್ಷಕ ದಳ, ಜಿಲ್ಲಾ ಪೌರ ರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಮಂಗಳಾ ಸಮೂಹ ಸಂಸ್ಥೆಯ ಚೇರ್ಮನ್ ಡಾ. ಗಣಪತಿ ಉದ್ಘಾಟಿಸಿದರು.


ಗೃಹರಕ್ಷಕರು ಮಾಡುವ ನಿಷ್ಕಾಮ ಸೇವೆಯನ್ನು ಜನರು ಗುರುತಿಸಬೇಕು. ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಗೃಹರಕ್ಷಕರ ಪಾತ್ರ ಬಹು ಹಿರಿದಾಗಿದೆ.ಅವರನ್ನು ಹುರಿದುಂಬಿಸುವ ಕೆಲಸವನ್ನು ನಾವು ಮಾಡಬೇಕು. ಆಜಾದೀ ಕೀ ಅಮೃತ ಮಹೋತ್ಸವದ ಅಂಗವಾಗಿ ಮಂಗಳಾ ಸಮೂಹ ಸಂಸ್ಥೆಯು ಗೃಹರಕ್ಷಕರಿಗಾಗಿ ಆಯೋಜಿಸಿದೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರಿಗೆ ಲಯನ್ಸ್ ಸೇವಾ ಸಂಸ್ಥೆ ಬೆನ್ನೆಲುಬಾಗಿ ನಿಂತಿದೆ. ದಿನದ 24 ಗಂಟೆಯೂ ಸೇವೆ ಸಲ್ಲಿಸುವ ಗೃಹರಕ್ಷಕರ ಆರೋಗ್ಯ ದೃಷ್ಟಿಯಿಂದ ಈ ನೇತ್ರ ತಪಾಸಣಾ ಶಿಬಿರವನ್ನು ಮಂಗಳಾ ಸಮೂಹ ಸಂಸ್ಥೆಯ ಅಪ್ಟೊಮೆಟ್ರಿ ವಿಭಾಗದ ಮೂಲಕ ಆಯೋಜಿಸಲಾಗಿದೆ. ಎಲ್ಲ ಗೃಹರಕ್ಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಲಯನ್ಸ್ ಕ್ಲಬ್ 317-ಡಿ ಮಂಗಳೂರು ಇದರ ಗವರ್ನರ್ ವಸಂತ ಕುಮಾರ್ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರು 40 ವರ್ಷ ಕಳೆದ ಬಳಿಕ ಪ್ರತಿ ವರ್ಷ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು. ಈ ರೀತಿ ಪರೀಕ್ಷೆ ಮಾಡಿಸಿದಲ್ಲಿ ಮುಂದೆ ಬರುವ ಕಣ್ಣಿನ ತೊಂದರೆಗಳನ್ನು ತಡೆಯಬಹುದಾಗಿದೆ. ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ನೀಡಿದರೆ ಬಹಳ ಉತ್ತಮ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ನೇತ್ರ ತಪಾಸಣೆ ಶಿಬಿರ ನಡೆಸಿರುವುದು ಶ್ಲಾಘನೀಯ ಎಂದರು.


ಮುಖ್ಯ ಅತಿಥಿಗಳಾಗಿ ನೇತ್ರ ತಜ್ಞ ಡಾ. ಶ್ರೀಪತಿ ಕಾಮತ್, ಮಂಗಳಾ ಅರೆ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರತಿಜ್ಞಾ ಸುಹಾಸಿನಿ, ಅಪ್ಟೊಮೆಟ್ರಿ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸೋನು, ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ಬಿ. ಸತೀಶ್ ರೈ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಲಿಯೋ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲಿಯೋ ಅಕ್ವಿನಸ್, ಕಾರ್ಯದರ್ಶಿ ಲಿಯೋ ಕ್ರಿಸ್ಟಿನ್ ಹೇರಿ ಹಾಗೂ ಲಯನ್ಸ್ ಕ್ಲಬ್ ಸದಸ್ಯರಾದ ಹೇಮಾ ರಾವ್, ಸುಧಾಮ ರೈ, ಗುರುಪ್ರೀತ್ ಆಳ್ವ ಮುಂತಾದವರು ಭಾಗವಹಿಸಿದ್ದರು.


ಮಂಗಳಾ ಅರೆವೈದ್ಯಕೀಯ ಕಾಲೇಜು, ಅಪ್ಟೊಮೆಟ್ರಿ ವಿಭಾಗದ ವೈದ್ಯರ ತಂಡದವರು ಕಾರ್ಯಕ್ರಮ ನೆರವೇರಿಸಿಕೊಟ್ಟರು. ದಕ ಜಿಲ್ಲಾ ಗೃಹರಕ್ಷಕ ದಳ ಉಪಸಮಾದೇಷ್ಟರಾದ  ರಮೇಶ್‌ ವಂದಿಸಿದರು. ನೂರಕ್ಕೂ ಹೆಚ್ಚು ಗೃಹರಕ್ಷಕಕರು ಮತ್ತು ಅವರ ಕುಟುಂಬಸ್ಥರು ಈ ಶಿಬಿರದ ಪ್ರಯೋಜನ ಪಡೆದುಕೊಂಡರು. ಸುಮಾರು 105 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post