ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳಲ್ಲಿ ಗೋಪೂಜೆ, ಗೋಉತ್ಪನ್ನಗಳ ಪ್ರಾತ್ಯಕ್ಷಿಕೆ ಮತ್ತು ಭೂಮಿಪೂಜೆ

Upayuktha
0


ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಇಂದು (ನ.6) ಗೋಪೂಜೆ, ಗೋಉತ್ಪನ್ನಗಳ ಪ್ರಾತ್ಯಕ್ಷಿಕೆ ಮತ್ತು ಭೂಮಿಪೂಜೆ ನೆರವೇರಿತು.


ಈ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಶ್ರೀ ಮಧುಸೂದನ ಭಟ್ ಸೊಂದಿ ಅವರು ಗೋವಿನ ಮಹತ್ವವನ್ನು ವಿವರಿಸಿದರು.

         

ಸೇವಾ ಸಮಿತಿಯ ಸದಸ್ಯ ಶ್ರೀ ರಮೇಶ್ ಭಟ್ ಸರವು ಅವರು ಗೋಪೂಜೆ ಮತ್ತು ಭೂಮಿಪೂಜೆಯ ಬಗ್ಗೆ ಸಂಕಲ್ಪವನ್ನು ಬೋಧಿಸಿದರು.


ನಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾರ್ತಿಕ್ ಗೋಪೂಜೆ ನೆರವೇರಿಸಿದರು. ವಿದ್ಯಾರ್ಥಿಗಳು ನಂದಿನಿ, ಭಾರತೀ ಮತ್ತು ಶಬಲಾ ಎಂಬ ಸಂಸ್ಥೆಯ ದೇಸೀ ಗೋವುಗಳಿಗೆ ಪುಷ್ಪಾರ್ಚನೆ ಮಾಡಿ, ಗೋಗ್ರಾಸ ನೀಡಿದರು.

      

ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್‌ದಾಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ, ಗೋಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಶ್ರೀ ಸತೀಶ್ ಶಾಸ್ತ್ರಿ, ಸ್ವಾಮಿ ಸದಾನಂದ ಸರಸ್ವತಿ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಹಾಗೂ ಶ್ರೀ ಭಾರತೀ ಪದವಿ ಪೂರ್ವ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಗೋಪೂಜೆಯಲ್ಲಿ ಪಾಲ್ಗೊಂಡರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top