ಬಂಟ್ವಾಳ, ಸುಳ್ಯ ಪತ್ರಕರ್ತರ ಸಂಘಕ್ಕೆ ಇಸಿಜಿ ಯಂತ್ರ ವಿತರಣೆ
ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್, ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಹೃದ್ರೋಗ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮ ನವೆಂಬರ್ 11ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ತನಕ ಲೇಡಿಹಿಲ್‍ನ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಕೆಎಂಸಿಯ ಹೃದ್ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್ ಭಾಗವಹಿಸಿ, ಕಾರ್ಡಿಯೋಲಜಿ ಅಟ್ ಡೋರ್ ಸ್ಟೆಪ್ (ಕ್ಯಾಡ್) ಬಗ್ಗೆ ಮಾಹಿತಿ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಬಂಟ್ವಾಳ ಮತ್ತು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಗಳಿಗೆ ಇಸಿಜಿ ಯಂತ್ರಗಳನ್ನು ವಿತರಿಸಲಾಗುವುದು.
ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಅಧ್ಯಕ್ಷತೆ ವಹಿಸಲಿದ್ದು, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು. ಪತ್ರಕರ್ತರು ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ