ಅಕ್ರಮ ಗೋ ಸಾಗಾಟ, ಗೋಹತ್ಯೆ ತಡೆಯಲು ಕಠಿಣ ಕ್ರಮ: ಗೃಹ ಸಚಿವ ಅರಗ ಜ್ಞಾನೇಂದ್ರ

Upayuktha
0

 



ಉಜಿರೆ: ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಅಕ್ರಮ ಗೋವುಗಳ ಸಾಗಾಟ ಹಾಗೂ ಅಕ್ರಮ ಕಸಾಯಿಖಾನೆ ತಡೆಗಟ್ಟಲು ಬಿಗಿಯಾದ ಕಾನೂನು ಕ್ರಮ ಅಳವಡಿಸಲಾಗುವುದು ಎಂದು ಹೇಳಿದರು.


ಅಕ್ರಮ ಮರಳು ಸಾಗಾಟ ತಡೆಯಲು ಹೊಸ ಕಾನೂನು ನೀತಿ ಜಾರಿಗೊಳಿಸಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿಗೆ ಅಧಿಕಾರ ನೀಡಲಾಗಿದೆ ಎಂದರು. ಯಾರು ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನೈತಿಕ ಪೊಲೀಸ್‌ ಗಿರಿ ತಡೆಗಟ್ಟಲಾಗುವುದು. ಮೂಢನಂಬಿಕೆ, ಬಡತನದ ನೆಪದಿಂದ ಆಮಿಷ ಒಡ್ಡುವುದನ್ನು ತಡೆಯಲು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.


ಬಳಿಕ ಸಚಿವರು ಕನ್ಯಾಡಿ ರಾಮಕ್ಷೇತ್ರದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಸುಲ್ಕೇರಿ ಶಾಲೆಗೆ ಭೇಟಿ ನೀಡಿದ ಬಳಿಕ ತೀರ್ಥಹಳ್ಳಿಗೆ ಪ್ರಯಾಣ ಮಾಡಿದರು.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top