ನ.13: ಕನ್ನಡ ರಾಜ್ಯೋತ್ಸವ ಸಂಭ್ರಮ ಮತ್ತು ಕವಿಗೋಷ್ಠಿ

Upayuktha
0


ಮಂಗಳೂರು:  ರೇಡಿಯೋ ಕೇಳುಗರ ಸಂಘ, ಮಂಗಳೂರು ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ದ.ಕ ಜಿಲ್ಲೆ ಇವರ ಸಹಯೋಗದಲ್ಲಿ ನ.13ರಂದು ಶನಿವಾರ ಕನ್ನಡ ರಾಜ್ಯೋತ್ಸವ ಸಂಭ್ರಮ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಆಯೋಜಿಸಲಾಗಿದೆ.


ನಗರದ ಕೆನರಾ ಕಾಲೇಜು ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು 'ಆಯುರ್ವೇದ ಮತ್ತು ಆರೋಗ್ಯ' ವಿಷಯದ ಕುರಿತು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಡಾ. ಸುರೇಶ ನೆಗಳಗುಳಿ ಅವರು ಉಪನ್ಯಾಸ ನೀಡಲಿದ್ದಾರೆ.


ಕೆನರಾ ಬ್ಯಾಂಕ್‌ ಮಂಗಳೂರು ಸರ್ಕಲ್ ಆಫೀಸ್‌ ಪ್ರಧಾನ ವ್ಯವಸ್ಥಾಪಕರಾದ ಬಿ. ಯೋಗೀಶ್ ಆಚಾರ್ಯ ಉದ್ಘಾಟಿಸಲಿದ್ದಾರೆ.


ಬರ್ಕೆ ಠಾಣೆ ಇನ್‌ಸ್ಪೆಕ್ಟರ್‌ ಜ್ಯೋತಿರ್ಲಿಂಗ ಚಂದ್ರಾಮ ಹೊನಕಟ್ಟಿ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಂಘಟನಾ ಕಾರ್ಯದರ್ಶಿ ಸಮುದ್ರವಳ್ಳಿ ವಾಸು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ ಸಿಎ ಎಸ್‌.ಎಸ್‌. ನಾಯಕ್‌ ಅಧ್ಯಕ್ಷತೆ ವಹಿಸಲಿದ್ದಾರೆ.


ಕವಿಗೋಷ್ಟಿಯಲ್ಲಿ 26 ಮಂದಿ ಕವಿಗಳು ಭಾಗವಹಿಸಲಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




Post a Comment

0 Comments
Post a Comment (0)
To Top