ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ. ಎಂ.ಪಿ ಶ್ರೀನಾಥ್ ಅವರು ಚುನಾಯಿತರಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕಗಳು ಹಾಗೂ ಕೇಂದ್ರ ಘಟಕದ ಅಧ್ಯಕ್ಷರ ಹುದ್ದೆಗಳಿಗೆ ಇಂದು ರಾಜ್ಯಾದ್ಯಂತ ಚುನಾವಣೆ ನಡೆದಿತ್ತು.
ದ.ಕ ಜಿಲ್ಲಾ ಘಟಕದ ಅಧ್ಯಕ್ಷರ ಹುದ್ದೆಗೆ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಡಾ. ಎಂ.ಪಿ. ಶ್ರೀನಾಥ್ ಮತ್ತು ಮಂಗಳೂರು ವಿಮಾನ ನಿಲ್ದಾಣದ ನಿವೃತ್ತ ನಿರ್ದೇಶಕರಾಗಿದ್ದ ಎಂ. ಆರ್. ವಾಸುದೇವ ಅವರು ಅಭ್ಯರ್ಥಿಗಳಾಗಿ ಕಣದಲ್ಲಿದ್ದರು.
ಡಾ. ಎಂ.ಪಿ ಶ್ರೀನಾಥ್ ಅವರಿಗೆ ನಿಕಟಪೂರ್ವ ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರ ಬೆಂಬಲವೂ ಇತ್ತು.
ಕೇಂದ್ರ ಪರಿಷತ್‌ನ ಫಲಿತಾಂಶವನ್ನು ನಿರೀಕ್ಷಿಸಲಾಗುತ್ತಿದೆ. ಕೇಂದ್ರ ಪರಿಷತ್‌ನ ಅಧ್ಯಕ್ಷರ ಹುದ್ದೆಗೆ ಒಟ್ಟು 21 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ