ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಜೀವನ ಕೌಶಲ ಕಾರ್ಯಾಗಾರ

Upayuktha
0



ಪುಂಜಾಲಕಟ್ಟೆ: ಸರಕಾರಿ ಪ್ರಥಮದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇದರ ಜಂಟಿ ಆಶ್ರಯದಲ್ಲಿ ದಿನಾಂಕ 13.11.2021ರಂದು ದ್ವಿತೀಯ ಬಿಕಾಂ ವಿದ್ಯಾರ್ಥಿಗಳಿಗೆ "ಜೀವನ ಕೌಶಲ ಕಾರ್ಯಾಗಾರ" ವನ್ನು ಹಮ್ಮಿಕೊಳ್ಳಲಾಯಿತು.


ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಇವರು ಅಧ್ಯಕ್ಷೀಯ ನುಡಿಗಳನ್ನಾಡಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಜೀವನ ಕೌಶಲ ತರಬೇತುದಾರರೂ ಆದ ಪ್ರೊ. ದೀಕ್ಷಿತಾ ವರ್ಕಾಡಿ ಮತ್ತು ಪ್ರೊ. ಸಂತೋಷ್ ಪ್ರಭು ಎಂ. ಇವರು ಕಾರ್ಯಾಗಾರವನ್ನು ನಡೆಸಿಕೊಟ್ಟರು.


ಈ ಕಾರ್ಯಕ್ರಮದಲ್ಲಿ ಕಾಲೇಜಿನ IQAC ಸಂಚಾಲಕರಾದ ಪ್ರೊ. ರವಿಶಂಕರ್ ಬಿ.  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಲೊಕೇಶ, ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಸಂಚಾಲಕರಾದ ಡಾ. ವಿಶಾಲ್ ಪಿಂಟೋ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top