ಸ್ವಉದ್ಯೋಗಕ್ಕಾಗಿ ಸಾಲ ಸೌಲಭ್ಯ

Upayuktha
0


ಮಂಗಳೂರು:
ಸ್ವಉದ್ಯೋಗ ಮಾಡಲು ಇಚ್ಛಿಸುವ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಪಿ.ಎಂ.ಇ.ಜಿ.ಪಿ ಯೋಜನೆಯಡಿ ಬ್ಯಾಂಕುಗಳ ಮೂಲಕ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಬಹುದು. 


ಈ ಯೋಜನೆಯಡಿ ಸ್ವಉದ್ಯೋಗ ಕೈಗೊಳ್ಳಲು ಆಸಕ್ತ ಯುವಕ ಯುವತಿಯರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.


ಆನ್‌ಲೈನ್‌ ಪೋರ್ಟಲ್ PMEGP website: www/kviconline.gov.in/pmegpeportal ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಯೆಯ್ಯಾಡಿ, ಮಂಗಳೂರು ಕಚೇರಿಯನ್ನುಅಥವಾ ದೂ.ಸಂ: 0824-2214021 ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top