ಉಡುಪಿ: ರಾಜ್ಯದ ಗೌರವಾನ್ವಿತ ಲೋಕಾಯುಕ್ತ ನ್ಯಾ. ಪಿ.ವಿಶ್ವನಾಥ ಶೆಟ್ಟಿ ಅವರು ನವೆಂಬರ್ 15 ರಿಂದ 18 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ನವೆಂಬರ್ 15 ರಂದು ಸಂಜೆ 5 ಗಂಟೆಗೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ನವೆಂಬರ್ 16 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳು ಮತ್ತು ಕೋವಿಡ್ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30 ರಿಂದ 4ರ ವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ, ನಂತರ ಕೊರ್ಗಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನವೆಂಬರ್ 17ರಂದು ಮಧ್ಯಾಹ್ನ 4.30 ರಿಂದ 5.30ರ ವರೆಗೆ ಜಿಲ್ಲೆಯ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ, ನಂತರ ಕೊರ್ಗಿಯಲ್ಲಿ ವಾಸ್ತವ್ಯ ಹೊಂದಿ ನವೆಂಬರ್ 18 ರಂದು ಬೆಳಗ್ಗೆ 10.45ಕ್ಕೆ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ