ಮಂಗಳೂರು ವಿವಿ: ಕನಕದಾಸ ಕೇಂದ್ರದಿಂದ ಶಾಲೆಗಳಲ್ಲಿ 'ಕನಕಾಭಿಯಾನ'

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನಪೀಠ ಮತ್ತು ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ 'ಕನಕಜಯಂತಿ' ಪ್ರಯುಕ್ತ ಕನಕ ತತ್ವಚಿಂತನ ಪ್ರಚಾರೋಪನ್ಯಾಸ ಮಾಲಿಕೆಯಡಿ "ಕನಕಾಭಿಯಾನ'' ಎಂಬ ಕಾರ್ಯಕ್ರಮ ಮಂಗಳೂರು ವಿಶ್ವವಿದ್ಯಾಲಯದ ದತ್ತು ಸ್ವೀಕೃತ ಶಾಲೆಗಳಲ್ಲಿ ನವೆಂಬರ್ 16ರಿಂದ 19ರವರೆಗೆ ನಡೆಯಲಿದೆ. ಇದರ ಅಂಗವಾಗಿ 'ಕನಕದಾಸರ ಜೀವನ ಮತ್ತು ಸಾಹಿತ್ಯ'ದ ಕುರಿತು ಉಪನ್ಯಾಸ ಮತ್ತು ರಸಪ್ರಶ್ನೆ ಕಾರ್ಯಕ್ರಮಗಳು ನಡೆಯಲಿವೆ.  


ನವೆಂಬರ್ 16ರ ಮಂಗಳವಾರ ಪೂರ್ವಾಹ್ನ 10.30ಕ್ಕೆ ಶ್ರೀರಾಮಕೃಷ್ಣ ಪ್ರೌಢಶಾಲೆ ಹರೇಕಳ ಇಲ್ಲಿ 'ಕನಕಾಭಿಯಾನ'ದ ಉದ್ಘಾಟನೆ ನಡೆಯಲಿರುವುದು. ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ. ಕಿಶೋರ್ ಕುಮಾರ್.ಸಿ.ಕೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿರುವರು. ಶ್ರೀರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಉಷಾಲತಾ ಹರೇಕಳ ಇವರು ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರು ವಿ.ವಿ. ದತ್ತು ಸ್ವೀಕಾರ ಯೋಜನೆಯ ಸಂಯೋಜಕ ಪ್ರೊ. ಪ್ರಶಾಂತ್ ನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ನೋಡಲ್ ಅಧಿಕಾರಿ ಡಾ.ಸಬಿತ ಶಾಲಾ ಮತ್ತು ಮಂಗಳೂರು ವಿವಿಯ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಉಪಸ್ಥಿತರಿರುವರು.


'ಕನಕಾಭಿಯಾನ' ನಡೆಯಲಿರುವಶಾಲೆಗಳು


ಶ್ರೀರಾಮಕೃಷ್ಣ ಪ್ರೌಢಶಾಲೆ ಹರೇಕಳ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢಶಾಲೆ ಕೊಣಾಜೆಪದವು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಲೋವರ್ ಪ್ರಾಥಮಿಕ ಶಾಲೆ ಕುಂಟಲಗುಳಿ ಕೊಣಾಜೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಜಗುಡ್ಡೆ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢಶಾಲೆ ನ್ಯೂಪಡ್ಪು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢಶಾಲೆ ಪಾವೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇನೋಳಿ, ಪಾವೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉರುಮನೆ, ಮಂಜನಾಡಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇರಳಕಟ್ಟೆ ಶಾಲೆಗಳಲ್ಲಿ ಕನಕಾಭಿನಯ ಕಾರ್ಯಕ್ರಮ ನಡೆಯಲಿದೆ.

 

ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನ ಸಹಾಯಕ ಆನಂದ ಎಂ ಕಿದೂರು, ಸಂಶೋಧನಾ ವಿದ್ಯಾರ್ಥಿಗಳಾದ ಚಂದನಾಕೆ.ಎಸ್, ನವ್ಯಶ್ರೀ ಎಸ್ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ರಸಪ್ರಶ್ನೆಯಲ್ಲಿ ವಿಜೇತರಾದ ಪ್ರತಿ ಶಾಲೆಯ ವಿದ್ಯಾರ್ಥಿಗಳಿಗೆ 23ರಂದು ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವʼ ಕನಕಜಯಂತಿʼ ಪ್ರಯುಕ್ತ ನಡೆಸಲಾಗುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಕನಕದಾಸ ಕೇಂದ್ರದ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top