ರಾಜ್ಯಾದ್ಯಂತ ಡಿಸೆಂಬರ್ 18ರಂದು ಮೆಗಾ ಲೋಕ್ ಅದಾಲತ್

Upayuktha
0

ಮಂಗಳೂರು: ಮುಂಬರುವ ಡಿಸೆಂಬರ್ 18ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.


ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್‌ಲೈನ್ ಅಥವಾ ವಿಡಿಯೋ ಕಾನ್ಪರೆನ್ಸ್ ಅಥವಾ ಇ-ಮೇಲ್ ಅಥವಾ ಎಸ್‌ಎಂಎಸ್ ಅಥವಾ ವಾಟ್ಸ್ ಅಪ್ ಅಥವಾ ಎಲೆಕ್ಟ್ರಾನಿಕ್ ಮೋಡ್ ಅಥವಾ ಖುದ್ದಾಗಿ ಹಾಜರಾಗಿ ಮಾಹಿತಿ ಪಡೆಯಬಹುದು.


ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಅಥವಾ ಖಾಯಂ ಜನತಾ ನ್ಯಾಯಾಲಯವನ್ನು ಆನ್‌ಲೈನ್ ಅಥವಾ ವಿಡಿಯೋ ಕಾನ್ಪರೆನ್ಸ್ ಅಥವಾ ಇ-ಮೇಲ್ ಅಥವಾ ಎಸ್‌ಎಂಎಸ್ ಅಥವಾ ವಾಟ್ಸ್ ಅಪ್, ಎಲೆಕ್ಟ್ರಾನಿಕ್ ಮೋಡ್, ಖುದ್ದಾಗಿ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪೃಥ್ವಿರಾಜ್ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top