ವಿವೇಕಾನಂದ ಕಾಲೇಜಿನ ವತಿಯಿಂದ ಸಮಾಜಮುಖಿಯಾಗಿ ಎನ್‌ಸಿಸಿ ದಿನಾಚರಣೆ

Upayuktha
0

 


ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ಎನ್‌ಸಿಸಿ ಘಟಕದ ಆಶ್ರಯದಲ್ಲಿ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ರಕ್ತದಾನ ಹಾಗು ಶ್ರಮದಾನ ಕಾರ್ಯಕ್ರಮ ನಡೆಯಿತು. ಪುತ್ತೂರಿನ ರೋಟರಿ ಕ್ಲಬ್ ಸಹಯೋಗದೊಂದಿಗೆ, ಇಲ್ಲಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‌ನಲ್ಲಿ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ರಕ್ತದಾನ ಮಾಡಿದರು. 


ಅನಂತರ ಇಲ್ಲಿನ ಆನಂದಾಶ್ರಮಕ್ಕೆ ಭೇಟಿ ನೀಡಿ, ಆಶ್ರಮದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡು, ಗಿಡಗಳನ್ನು ನಡೆಲಾಯಿತು. ಆಶ್ರಮ ನಿವಾಸಿಗಳಿಗಾಗಿ ಕಾಲೇಜಿನ ಎನ್‌ಸಿಸಿ ಘಟಕದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಎನ್‌ಸಿಸಿ ಘಟಕದ ಸಂಯೋಜನಾಧಿಕಾರಿ ಲೆ. ಭಾಮಿ ಅತುಲ್ ಶೆಣೈ ಹಾಗು ಸದಾಶಿವ ಪೈ ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top