||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಿಲ್ಲಿಯಲ್ಲಿ ಪ್ರಧಾನಿ ಮೋದಿ- ಪೇಜಾವರ ಶ್ರೀ ಭೇಟಿ

ದಿಲ್ಲಿಯಲ್ಲಿ ಪ್ರಧಾನಿ ಮೋದಿ- ಪೇಜಾವರ ಶ್ರೀ ಭೇಟಿ


ಉಡುಪಿ: ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನವದೆಹಲಿಯಲ್ಲಿ ಸೋಮವಾರ ಸಂಜೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.‌


ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ಯನ್ನು ಸ್ವೀಕರಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಈ ಭೇಟಿ ನಡೆಯಿತು.


ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಮೋದಿಯವರು ಶ್ರೀ ವಿಶ್ವೇಶತೀರ್ಥರನ್ನು ವಿಶೇಷವಾಗಿ ಸ್ಮರಿಸಿದರು.


ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಈರ್ವರೂ ಸಮಾಲೋಚನೆಗೈದರು.  

ನರೇಂದ್ರ ನೋದಿಯವರಿಗೆ ಯಕ್ಷಗಾನದ ಕೇದಗೆ ಮುಂಡಾಸಿನ ಕಿರೀಟ ತೊಡಿಸಿ ಜರತಾರಿ ಶಾಲು, ಬೆಳ್ಳಿಯ ತಟ್ಟೆಯಲ್ಲಿ ಉಡುಪಿ ಶ್ರೀ ಕೃಷ್ಣನ ಗಂಧ, ನಿರ್ಮಾಲ್ಯ ತುಳಸಿ ನೀಡಿ  ಆಶೀರ್ವದಿಸಿದರು. ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ಅವರು ರಚಿಸಿದ ಮೋದಿಯವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಸುಂದರವಾದ ತೈಲಚಿತ್ರ ಹಾಗೂ ಸಂಸ್ಕೃತ, ಕನ್ನಡ, ತುಳು ಲಿಪಿಗಳಲ್ಲಿ ನರೇಂದ್ರ ಮೋದಿಯವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿಯವರಿಗೆ ನೀಡಿದರು. ಈ ಭೇಟಿಯ ಬಗ್ಗೆ ಶ್ರೀಗಳು ಮತ್ತು ಪ್ರಧಾನಮಂತ್ರಿಗಳು ಅತೀವ ಸಂತಸ ವ್ತಕ್ತಪಡಿಸಿದರು. 


ಶೀಘ್ರ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ:

ಈ (ಪ್ರಧಾನ ಮಂತ್ರಿ ಅಧಿಕಾರದ) ಅವಧಿಯಲ್ಲೇ ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳು ಆಹ್ವಾನಿಸಿದರು.‌ ಖಂಡಿತ ಬಂದೇ ಬರ್ತೇನೆ ಚಿಂತೆ ಬೇಡ ಎಂದು ಮೋದಿಯವರು ತುಂಬ ಹರ್ಷದಿಂದಲೇ ತಿಳಿಸಿದರು.

ಇದೇ ಸಂದರ್ಭದಲ್ಲಿ, 1. ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುವುದು,

2. ದೇಶಾದ್ಯಂತ ಹಿಂದೂ ಶ್ರದ್ಧಾಕೇಂದ್ರಗಳನ್ನು ಸರ್ಕಾರಿ ವ್ಯವಸ್ಥೆಯಿಂದ ಸ್ವಾಯತ್ತಗೊಳಿಸುವುದು,

3. ಮಹರ್ಷಿ ವೇದವ್ಯಾಸರ ಜಯಂತಿಯನ್ನು (ಆಷಾಢ ಪೂರ್ಣಿಮಾ ಅಥವಾ ಒಂದು ನಿರ್ದಿಷ್ಟ ದಿನಾಂಕವನ್ನು) "ತತ್ತ್ವಜ್ಞಾನ ದಿನ" ಅಥವಾ "ಅಧ್ಯಾತ್ಮ ದಿನ" ಎಂದು ಘೋಷಿಸಿ ಸರ್ಕಾರಿ ಆಚರಣೆಗೆ  ವ್ಯವಸ್ಥೆಗೊಳಿಸುವುದು, ಹಾಗೂ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ಎಂಬ ನಾಲ್ಕು ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದರು. ಈ ಬಗ್ಗೆಯೂ ಗಮನಹರಿಸುವುದಾಗಿ ಮೋದಿಯವರು ತಿಳಿಸಿದರು.‌ 


ಶ್ರೀ ಪೇಜಾವರ ಮಠದ ದಿವಾನರಾದ ಎಂ ರಘುರಾಮಾಚಾರ್ಯ, ಡಿ ಪಿ ಅನಂತ್, ಸಾಮಾಜಿಕ ಕಾರ್ಯಕರ್ತ ಶ್ರೀಗಳ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.


ಶ್ರೀ ಪೇಜಾವರ ಮಠಾಧೀಶ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರವವು ಮರಣೋತ್ತರವಾಗಿ 2019ರಲ್ಲಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿಯನ್ನು ಅವರ ಉತ್ತರಾಧಿಕಾರಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನಿಸಿದರು.

(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ
0 Comments

Post a Comment

Post a Comment (0)

Previous Post Next Post