ಕರಾವಳಿಯಲ್ಲಿ ಮಳೆಯ ವಾತಾವರಣವು ಮುಂದುವರೆದಿದೆ. ನವೆಂಬರ್ 24 ರವರೆಗೂ ಕರಾವಳಿಯಾದ್ಯಂತ ಅಧಿಕ ಮಳೆಯಾಗುವ ಸಾಧ್ಯತೆ ಇರುವುರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ.
ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 20 ರಿಂದ ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ.
ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ