|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ


ಮಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


ವಿಧಾನ ಇಂತಿದೆ: ಅರ್ಹ ವಿದ್ಯಾರ್ಥಿಗಳು ವೆಬ್ ಸೈಟ್ ವಿಳಾಸ:www.sw.kar.nic.inನಲ್ಲಿ POST METRIC SCHOLARSHIP 2021-22 (E-ATTESTATION PORTAL)ನಲ್ಲಿ ಅರ್ಜಿ ಸಲ್ಲಿಸಬೇಕು. ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿ ಲಾಗಿನ್ (STUDENT LOGIN)ನಲ್ಲಿ ಹಳೆಯ ನೋಂದಣಿ ಸಂಖ್ಯೆ ಹಾಗೂ ಪಾಸ್‌ವರ್ಡ್ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು.


ವಿದ್ಯಾರ್ಥಿ/ಪೋಷಕರ ಆಧಾರ್ ಸಂಖ್ಯೆ, ಕಾಲೇಜು ಮತ್ತು ಕೋರ್ಸಿನ ವಿವರ, ವಿದ್ಯಾರ್ಥಿ/ಪೋಷಕರ ಮೊಬೈಲ್ ಸಂಖ್ಯೆ, ಜಾತಿ/ಆದಾಯ ಪತ್ರದ ಆರ್.ಡಿ ಸಂಖ್ಯೆ ಪ್ರತಿ, ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ/ಕಾಲೇಜು ನೋಂದಣಿ ಸಂಖ್ಯೆ, ವಿದ್ಯಾರ್ಥಿಯ ಇ-ಮೇಲ್‌ ಐಡಿ, ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ರಶೀದಿಯನ್ನು ಇ-ದೃಢೀಕರಣ ಮಾಡಿಸುವ ಅಗತ್ಯವಿರುವುದಿಲ್ಲ.


ಅರ್ಹತೆಗಳು: ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ 2.50 ಲಕ್ಷ ರೂ.ಗಳು. ವಿದ್ಯಾರ್ಥಿಯು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು.


ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 0824-2423619 ಹಾಗೂ 0824-2441269 ಸಂಪರ್ಕಿಸುವಂತೆ ಮಂಗಳೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 (ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post