ನವೆಂಬರ್ 26ರಿಂದ ಎಸ್‍ಎಫ್‍ಐ 17ನೇ ಮಾಸ್ಟರ್ ಚಾಂಪಿಯನ್ ಶಿಪ್‌ನ ಈಜು ಸ್ಪರ್ಧೆ

Upayuktha
0

ಮಂಗಳೂರು: ಇದೇ ನವೆಂಬರ್ 26 ರಿಂದ 28ರವರೆಗೆ ಎಸ್‍ಎಫ್‍ಐ (ಸ್ಮಿಮ್ಮಿಂಗ್ ಫೆಡರೇಷನ್ ಆಫ್ ಇಂಡಿಯಾ) 17ನೇ ಮಾಸ್ಟರ್ ಚಾಂಪಿಯನ್ ಶಿಫ್‍ನ ಈಜು ಸ್ಪರ್ಧೆಗಳು ನಡೆಯಲಿದೆ. ಅದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.


ಅವರು ನ.11ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಈ ಸೂಚನೆ ನೀಡಿದರು.


ನಗರದ ಸೇಂಟ್ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನ.26ರಿಂದ 17ನೇ ಎಸ್‍ಎಫ್‍ಐ ರಾಷ್ಟ್ರೀಯ ಮಾಸ್ಟರ್ಸ್ ಚಾಂಪಿಯನ್ ಶಿಫ್‍ನ ಈಜು ಸ್ಪರ್ಧೆಗಳು ನಡೆಯಲಿವೆ. ಅದಕ್ಕಾಗಿ ಆ ಕಾಲೇಜಿನ ಸುತ್ತಮುತ್ತಲೂ ಸ್ಮಾಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಮುಂದಿನ 10 ದಿನದೊಳಗೆ ಪೂರ್ಣಗೊಳಿಸಬೇಕು. ನ್ಯಾಷನಲ್ ಮಾಸ್ಟರ್ ಚಾಂಪಿಯನ್ ಶಿಫ್‍ನಲ್ಲಿ 25 ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಗಳಿವೆ. ಸೇಂಟ್ ಅಲೋಶಿಯಸ್ ಕಾಲೇಜಿನ ಅಂತರಾಷ್ಟ್ರೀಯ ಗುಣಮಟ್ಟದ ಈಜುಕೊಳದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.


ಈ ಸ್ಪರ್ಧೆಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಾಷ್ ಟ್ಯಾಗ್ ಗಳನ್ನು ಬಳಸಿ ಹೆಚ್ಚು ಪ್ರಚಾರ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಯವರು, ಅಂತರಾಷ್ಟ್ರೀಯ ಹಾಗೂ ದೇಶದ ವಿವಿಧ ರಾಜ್ಯಗಳಿಂದ ಕ್ರೀಡಾಪಟುಗಳು ಆಗಮಿಸಲಿದ್ದಾರೆ. ಅದಕ್ಕಾಗಿ ಉತ್ತಮ ವೈದ್ಯಕೀಯ ವ್ಯವಸ್ಥೆ, ಊಟ, ಉಪಚಾರ, ವಸತಿ ಹಾಗೂ ಇನ್ನಿತರ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.


ಸಭೆಯಲ್ಲಿ ರಾಜ್ಯ ಸ್ವಿಮ್ಮಿಂಗ್ ಪೂಲ್ ಅಸೋಸಿಯೇಷನ್ ಅಧ್ಯಕ್ಷ ಗೋಪಾಲ ಹೊಸೂರ್, ಕಾರ್ಯದರ್ಶಿ ಸತೀಶ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿ ಸೋಜಾ, ಸೇಂಟ್ ಅಲೋಶಿಯಸ್ ಕಾಲೇಜಿನ ರೆವರೆಂಡ್ ಫಾದರ್ ಮೆಲ್ವಿನ್ ಪಿಂಟೋ, ಹೋಟೆಲ್ ಅಸೋಸಿಯೇಷನ್‍ನ ನಿಶಾಂಕ್ ಸುವರ್ಣ, ವಿವಿಧ ಕ್ರೀಡಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top