ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ

Upayuktha
0

 




ಉಡುಪಿ:
ಕೇಂದ್ರ ಹಾಗೂ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254-230370 ಮತ್ತು ಕಾರ್ಕಳ ದೂ.ಸಂಖ್ಯೆ : 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)

Post a Comment

0 Comments
Post a Comment (0)
To Top