ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳರು ಕೈ ತೊಳೆದುಕೊಳ್ಳುವ ಮಹತ್ವ ತಿಳಿಸಿ ಪ್ರಾತ್ಯಕ್ಷಿಕೆ ನಡೆಸಿದರು. ವಿದ್ಯಾರ್ಥಿಗಳಾದ ಪ್ರತಿಷ್ಠಾ ಹಾಗೂ ವಿಕಾಸ್ ಭಟ್ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದರು.
ಸಾಮಾಜಿಕ ಜವಾಬ್ದಾರಿ ಉಪಕ್ರಮಗಳ ವೇದಿಕೆಯ ಪ್ರಧಾನ ಸಂಯೋಜಕ ಹಾಗೂ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಮಹೇಶ ಕುಮಾರ್ ಶೆಟ್ಟಿಯವರು ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿ ಶ್ರೀಚರಣ್ ಎಂ.ಎಸ್. ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.