ವಿವಿಧ ವಿನ್ಯಾಸದ ವಿದ್ಯುದ್ದೀಪಗಳಿಂದ ಸಿಂಗಾರಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳ

Upayuktha
0


ಉಜಿರೆ:
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರವು ವಿವಿಧ ವಿನ್ಯಾಸದ ವಿದ್ಯುದ್ದೀಪಗಳಿಂದ ಸಿಂಗಾರಗೊಂಡಿದೆ. ಮದುಮಗಳಂತೆ ಅಲಂಕಾರಗೊಂಡಿರುವ ಮಂಜುನಾಥನ ದೇಗುಲವನ್ನು ಕಣ್ತುಂಬಿಕೊಳ್ಳಲು ಭಕ್ತ ಸಾಗರ ಹರಿದು ಬರುತ್ತಿದೆ.



ನಾಳೆಯಿಂದ ಎಂದರೆ ನ.29 ರಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮವು ಆರಂಭಗೊಳ್ಳಲಿದೆ. ಡಿ. 4ಕ್ಕೆ ಲಕ್ಷ ದೀಪಗಳ ಉತ್ಸವ ನಡೆಯಲಿದೆ. ಈ ಸಂಭ್ರಮವು ಡಿ.5ರ ತನಕ ಮುಂದುವರೆಯಲಿದೆ. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ದೀಪೋತ್ಸವಕ್ಕೆ ಇನ್ನಷ್ಟು ಮೆರುಗು ನೀಡಲಿದೆ.

 


ಡಿ.2 ರಂದು ನಡೆಯಲಿರುವ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಒಟ್ಟಾರೆಯಾಗಿ ಈ ಬಾರಿಯ ಲಕ್ಷ ದೀಪೋತ್ಸವದ ದಿವ್ಯ ಪ್ರಭೆ ಎಲ್ಲೆಡೆಯೂ ಭವ್ಯವಾಗಿ ಆವರಿಸುವಲ್ಲಿ ಸಂದೇಹವಿಲ್ಲ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top