||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೇದಾರನಾಥ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ಸಜ್ಜು

ಕೇದಾರನಾಥ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ಸಜ್ಜುನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪುನರ್ನಿರ್ಮಾಣ ಸಮಾಧಿಯನ್ನು ಉದ್ಘಾಟಿಸುವ ಕಾರ್ಯಕ್ರಮದ ನೇರ ಪ್ರಸಾರವನ್ನು ನೋಡುವ ಭಾಗ್ಯ ನಂಜನಗೂಡು ಪಟ್ಟಣದ ಜನತೆಗೆ ಲಭಿಸಲಿದೆ.


ಬೆಳಗ್ಗೆ 10:30 ರಿಂದ 11 ಗಂಟೆಯವರೆಗೆ ಪ್ರಧಾನ ಮಂತ್ರಿಗಳು ಪ್ರಾರ್ಥನೆ ಸಲ್ಲಿಸುವ ಮತ್ತು ಸಮಾಧಿ ಉದ್ಘಾಟನೆಯ ನೇರ ಪ್ರಸಾರ ಮಾಡಲು ಅನುಕೂಲವಾಗುವಂತೆ ಶ್ರೀಕಂಠೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ಎಲ್ಇಡಿ ಪರದೆಯನ್ನು ನಿರ್ಮಿಸಲಾಗುವುದು ಎಂದು ನಂಜನಗೂಡು ಶಾಸಕ ಬಿ ಹರ್ಷವರ್ಧನ್ ತಿಳಿಸಿದ್ದಾರೆ. Upayuktha


ದೇಶದಾದ್ಯಂತ ಅನೇಕ ದೇವಾಲಯಗಳು ಪ್ರಧಾನ ಮಂತ್ರಿಯವರ ಕಾರ್ಯಕ್ರಮ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಿವೆ. ಕರ್ನಾಟಕದಲ್ಲಿ ಧರ್ಮಸ್ಥಳ, ಮಲೆಮಹಾದೇಶ್ವರ ಮತ್ತು ನಂಜನಗೂಡು ಈ 3 ದೇವಸ್ಥಾನಗಳಲ್ಲಿ ಮಾತ್ರ ನೇರ ಪ್ರಸಾರ ವೀಕ್ಷಣೆಗೆ ಅವಕಾಶ ನೀಡಲಾಗಿದೆ.


ಈ ಕಾರ್ಯಕ್ರಮವನ್ನು ವೀಕ್ಷಿಸಲು ನಂಜನಗೂಡು ದೇವಸ್ಥಾನದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ದಾರೆ. ಸಮಾಧಿಯಲ್ಲಿ 12 ಅಡಿ ಎತ್ತರದ ಶ್ರೀ ಶಂಕರಾಚಾರ್ಯರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ನ.5ರಂದು ಅನಾವರಣಗೊಳಿಸಲಾಗುವುದು. ವಿಶೇಷವೆಂದರೆ, ಈ ಪ್ರತಿಮೆಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ.


ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:

ಬಿಹರ್ಷವರ್ಧನ್

ಶಾಸಕರು - ನಂಜನಗೂಡು

M: 99010 99955 

Email: bharshavardhan.mla@gmail.com(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post