ಪುತ್ತೂರು ನ.25: ಸಾಮಾಜಿಕ ಕಾರ್ಯದಲ್ಲಿ ಪ್ರತಿಯೊಂದು ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಅದರಲ್ಲಿ ಎನ್‌ಎಸ್‌ಎಸ್ ಘಟಕವು ಒಂದು. ಸಮಾಜದಲ್ಲಿ ನಿರತರಾಗಿರುವ ಹಾಗೂ ಸಾಮಾಜಿಕ ಕಾರ್ಯಗಳಿಗೆ ಶ್ರಮದಾನ ಮಾಡಲು ಈ ತಂಡವು ಸಹಕಾರಿಯಾಗಿದೆ.
ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪೆರಿಯತ್ತೊಡಿಯಲ್ಲಿ ಬಡತನದಿಂದ ಕೂಡಿದ ಮಹಿಳೆಯೊಬ್ಬರ ಮನೆಯನ್ನು ಪುನರ್ ನಿರ್ಮಾಣ ಮಾಡಲು ಗುರುವಾರದಂದು ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಇಲ್ಲಿನ ವಿವೇಕಾನಂದ ಕಾಲೇಜು ಮಹಾವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ವಿಷ್ಣುಕುಮಾರ್ ಹಾಗೂ ಇತಿಹಾಸ ವಿಭಾಗದ ಉಪನ್ಯಾಸಕ ಡಾ. ಎಂ. ಜಿ ಪ್ರಮೋದ್ ವಿದ್ಯಾರ್ಥಿಗಳೊಂದಿಗೆ ಭಾಗಿಯಾಗಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ