ಕುಪ್ಪಂ ದ್ರಾವಿಡ ವಿವಿ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0

ಶ್ರೀನಿವಾಸವನಂ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ, ಶ್ರೀನಿವಾಸವನಂ ಇಲ್ಲಿನ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗವು ಕನ್ನಡ ರಾಜ್ಯೋತ್ಸವ ಸಂಭ್ರಮದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿದೆ.


'ದ್ರಾವಿಡ ಭಾಷೆಗಳ ಸಾಹಿತ್ಯ: ಸಾಮ್ಯ ಮತ್ತು ಅನನ್ಯತೆ' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಖ್ಯಾತ ವಿಮರ್ಶಕರು ಹಾಗೂ ನಿವೃತ್ತ ಪ್ರಾಧ್ಯಾಪಕರು ಆಗಿರುವ ಡಾ. ಹೆಚ್ ಎಸ್ ರಾಘವೇಂದ್ರ ರಾವ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು.


ನವೆಂಬರ್ 25ರಂದು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಗೂಗಲ್ ಮೀಟ್  http://meet.google.com/efw.agby.xnp ಮೂಲಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಭಾಗವಹಿಸುವ ಎಲ್ಲರಿಗೂ ವಿದ್ಯುನ್ಮಾನ ಪ್ರಮಾಣ ಪತ್ರಗಳನ್ನು ನೀಡಲಾಗುವುದು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top