|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದ. ಕ. ಜಿಲ್ಲಾ ರೆಡ್‌ಕ್ರಾಸ್‌ಗೆ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ: ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ

ದ. ಕ. ಜಿಲ್ಲಾ ರೆಡ್‌ಕ್ರಾಸ್‌ಗೆ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ: ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ

 


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಘಟಕ ಮಾಡಿರುವ ಸರ್ವ ಸೇವೆಗಳನ್ನು ಪರಿಗಣಿಸಿ 2019-20ನೇ ಸಾಲಿನ ರಾಜ್ಯದ ಅತ್ಯುತ್ತಮ ಜಿಲ್ಲಾ ಘಟಕ ಪ್ರಶಸ್ತಿಗೆ ಭಾಜನವಾಗಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜ್ಯಪಾಲ ಹಾಗೂ ರಾಜ್ಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷರೂ ಆಗಿರುವ ಥಾವರ್‌ಸಿಂಗ್ ಗೆಹ್ಲೋಟ್ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮಂಗಳವಾರ ಪ್ರದಾನ ಮಾಡಿದರು.


ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಘಟಕದ ಚೇರ್ ಮೆನ್  ಸಿಎ ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ, ರೆಡ್‌ಕ್ರಾಸ್ ರಾಜ್ಯ ಘಟಕದ ಸದಸ್ಯ ಯತೀಶ್ ಬೈಕಂಪಾಡಿ ಪ್ರಶಸ್ತಿಯನ್ನು ಸ್ವೀಕರಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಕೋವಿಡ್ ಸಂದರ್ಭ ಮಾಡಿರುವ ಅನಿವಾಸಿ ಭಾರತೀಯರಿಗೆ ಲಸಿಕಾ ಅಭಿಯಾನ, ಮನೆ ಮನೆಗೆ ಲಸಿಕೆ, ಕೊರೊನಾ ಅರ್ಹ ಸಂತ್ರಸ್ತರಿಗೆ ಆಹಾರ ಸಾಮಾಗ್ರಿಗಳ ವಿತರಣೆ, ಔಷಧಗಳ ಪೂರೈಕೆ, ರಕ್ತ ಒದಗಿಸುವಿಕೆ, ವಿದ್ಯಾರ್ಥಿ ಹಾಗೂ ಅಧ್ಯಾಪಕರಲ್ಲಿ ಪ್ರಾಥಮಿಕ ಚಿಕಿತ್ಸೆ ಜಾಗೃತಿ ಕರ‍್ಯಕ್ರಮ ಸೇರಿದಂತೆ ಸರ್ವ ಸೇವಾ ಚುಟವಟಿಕೆಗಳಲ್ಲಿ ಅಗ್ರಮಾನ್ಯ ಸ್ಥಾನವನ್ನು ಪಡೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರೆಡ್‌ಕ್ರಾಸ್ ಘಟಕ ರಾಜ್ಯದ ಎಲ್ಲಾ ರೆಡ್‌ಕ್ರಾಸ್ ಘಟಕಗಳಲ್ಲಿ ಅತ್ಯುತ್ತಮ ಘಟಕ ಎಂದು ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಘಟಕವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿದೆ.


ಇದರ ಜತೆಗೆ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಯೂತ್ ರೆಡ್‌ಕ್ರಾಸ್‌ನ್ನು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿ ಬಲಪಡಿಸಿದ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರೆಡ್‌ಕ್ರಾಸ್ ಚಟುವಟಿಕೆಯನ್ನು ಎನ್‌ಸಿಸಿ, ಎನ್‌ಎಸ್‌ಎಸ್ ಮಾದರಿಯಲ್ಲಿ ಪಠ್ಯೇತರ ಚಟುವಟಿಕೆಯನ್ನಾಗಿ ಸೇರ್ಪಡೆಗೊಳಿಸಲು ಶ್ರಮಿಸಿದ ಕೀರ್ತಿಯೂ ದ. ಕ. ಜಿಲ್ಲಾ ರೆಡ್‌ಕ್ರಾಸ್‌ಗೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ರೆಡ್‌ಕ್ರಾಸ್ ಯೂತ್ ವಿಂಗ್ 2019-20ನೇ ಸಾಲಿನ ಬೆಸ್ಟ್ ಫರ್ಫೋಮಿಂಗ್ ಯುನಿವರ್ಸಿಟಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಪ್ರಶಸ್ತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಸ್. ಯಡಪಡಿತ್ತಾಯ ಹಾಗೂ ವಿವಿ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ರಾಜ್ಯಪಾಲರಾದ ಥಾವರ್‌ಸಿಂಗ್ ಗೆಹ್ಲೋಟ್ ಅವರಿಂದ ಪಡೆದುಕೊಂಡರು.


'ಮಾನವೀಯ ಸೇವಾ ಕಾರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯುತ್ತಮ ರೆಡ್‌ಕ್ರಾಸ್ ಘಟಕ ಎಂದು ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಘಟಕವನ್ನು ರಾಜ್ಯಮಟ್ಟದಲ್ಲಿ ಗುರುತಿಸಿ, ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಇದರೊಂದಿಗೆ ನಮಗೆ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ. ದ. ಕ ಜಿಲ್ಲಾ ರೆಡ್‌ಕ್ರಾಸ್ ಘಟಕದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರ ಪ್ರೋತ್ಸಾಹ, ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರ ಪರಿಶ್ರಮ, ಸಿಬ್ಬಂದಿಗಳ ಕರ್ತವ್ಯ ನಿಷ್ಠೆ ಹಾಗೂ ರೆಡ್‌ಕ್ರಾಸ್ ಸದಸ್ಯರ ಸಹಕಾರದಿಂದ ಇದು ಸಾಧ್ಯವಾಗಿದೆ.'

-ಸಿಎ ಶಾಂತಾರಾಮ ಶೆಟ್ಟಿ, ಚೇರ್ ಮನ್ 

ದ. ಕ. ಜಿಲ್ಲಾ ರೆಡ್‌ಕ್ರಾಸ್ ಘಟಕ.  


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post